‘ಬೆಟ್ಟದ ಹೂವು” ಖ್ಯಾತಿಯ ಹಿರಿಯ ನಟ ಶಂಖನಾದ ಅರವಿಂದ್ ಕೊರೋನಾಗೆ ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ‘ಬೆಟ್ಟದ ಹೂವು” ಖ್ಯಾತಿಯ ಹಿರಿಯ ಕಲಾವಿದ ಶಂಖನಾದ ಅರವಿಂದ್ (70 ) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 13 ದಿನಗಳ ಹಿಂದೆ ಕೊರೊನಾ ಸೊಂಕಿಗೆ ತುತ್ತಾಗಿ ವಿಕ್ಟೊರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಅರವಿಂದ್ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 1 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಿನ್ನಲೆ ಗಾಯಕಿಯಾಗಿ ಗುರುತಿಸಿಕೊಂಡಿದ್ದ ಅರವಿಂದ್ ಪತ್ನಿ ರಮಾ ಕೂಡ ಜನವರಿ 23ರಂದು ಉಸಿರಾಟದ ತೊಂದರೆಯಿಂದ ಕೊನೆಯುಸಿರೆಳೆದ್ದರು.

250 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ಕಲಾವಿದ ಅರವಿಂದ್ ಮೃತಪಟ್ಟಿರುವ ಬಗ್ಗೆ ಅವರ ಪುತ್ರಿ ಮಾನಸ ಹೊಳ್ಳ ತಮ್ಮ ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ.

“ನಮ್ಮ ತಂದೆ ಸತತ 13 ದಿನಗಳು ಆಸ್ಪತ್ರೆಯಲ್ಲಿ ಹೋರಾಟ ನಡೆಸಿ ಇಂದು 1 ಘಂಟೆಗೆ ದೈವದೀನರಾಗಿದ್ದಾರೆಂದು ತಿಳಿಸಲು ವಿಶಾದಿಸುತ್ತೇನೆ ಎಂದು ಅವರು ಪುತ್ರ ಬರೆದುಕೊಂಡಿದ್ದಾರೆ. ಮೃತರು ಮೂವರು ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

70-80ರ ದಶಕದಲ್ಲಿ ಅರವಿಂದ್ ಬಹು ಬೇಡಿಕೆಯ ಕಲಾವಿದನಾಗಿ ಗುರುತಿಸಿಕೊಂಡಿದ್ದರು. ಕಾಶಿನಾಥ್ ಸಿನಿಮಾಗಳ ಮೂಲಕ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದರು. ಇತ್ತೀಚಿಗೆ ಕನ್ನಡದ ಕೆಲವೊಂದು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು.

Facebook Comments

Sri Raghav

Admin