ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸುಸಜ್ಜಿತ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರ ಆರಂಭ
ಈ ಸುದ್ದಿಯನ್ನು ಶೇರ್ ಮಾಡಿ
ಮೈಸೂರು,ಆ.8-ಕನ್ನಡ ಭಾಷಾ ಬೆಳವಣಿಗೆಗಾಗಿ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ 10 ಎಕರೆ ಪ್ರದೇಶದಲ್ಲಿ ಸುಸಜ್ಜಿತವಾದ ಕನ್ನಡ ಶಾಸ್ತ್ರೀಯ ಅಧ್ಯಯನದ ಕೇಂದ್ರವನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.
ಕನ್ನಡ ಅಭಿವೃದ್ದಿ ಪ್ರಾಕಾರದ ಅಧ್ಯಕ್ಷ ಸೇರಿದಂತೆ ಹಲವು ಮಂದಿ ಗಣ್ಯರು ಸಚಿವರನ್ನು ಭೇಟಿಯಾಗಿ ಈ ವಿಷಯ ಪ್ರಸ್ತಾಪಿಸಿದಾಗ ಹೀಗೆ ಭರವಸೆ ನೀಡಿದ್ದಾರೆ.
ಕನ್ನಡ ಭಾಷೆಗೆ ಕೇಂದ್ರ ಸರ್ಕಾರ ಶಾಸ್ತ್ರೀಯ ಸ್ಥಾನಮಾನ ನೀಡಿ ಹಲವು ವರ್ಷಗಳೇ ಕಳೆದಿದೆ. ಹಾಗಿದ್ದರೂ ಶಾಶ್ವತ ಅಧ್ಯಯನದ ಕೇಂದ್ರವನ್ನು ಆರಂಭ ಮಾಡದಿರುವುದು ನೋವಿನ ಸಂಗತಿ ಎಂದು ನಾಗಾಭರಣ ತಿಳಿಸಿದ್ದರಿಂದ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
Facebook Comments