ಕನ್ನಡ ಹಾಸ್ಯ ನಟ ಮೈಕಲ್‌ ಮಧು ವಿಧಿವಶ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ತನ್ನ ವಿಭಿನ್ನ ಮ್ಯಾನರಿಸಂ ಮೂಲಕ ವಿಚಿತ್ರ ವೇಷ ಭೂಷಣಗಳೊಂದಿಗೆ ಪ್ರೇಕ್ಷಕರ ಗಮನ ಸೆಳೆದಿದ್ದ ಕನ್ನಡ ಚಿತ್ರರಂಗದ ಹಾಸ್ಯನಟ ಮೈಕಲ್‌ ಮಧು ಬುಧವಾರ ಬೆಂಗಳೂರಿನ ಕೆ.ಆರ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಮಧುಮೇಹ ಮತ್ತಿತರ ಆರೋಗ್ಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಮಧು ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಧು ಮೃತರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕಳೆದ ಎರಡೂವರೆ ದಶಕಗಳಿಂದ ಕನ್ನಡದ ಸುಮಾರು 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಮೈಕಲ್‌ ಮಧು ವಿವಿಧ ಹಾಸ್ಯ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು. ಮೈಕಲ್ ಮಧು ಅವರು ಓಂ, ಲವ್ ಟ್ರೇನಿಂಗ್ ಸ್ಕೂಲ್, ಮೀಸೆ ಹೊತ್ತ ಗಂಡಸಿಗೆ ಡಿಮ್ಯಾಂಡಪ್ಪೊ ಡಿಮ್ಯಾಂಡು, ಪಾಪಿಗಳ ಲೋಕದಲ್ಲಿ, ಎಕೆ 47, ಎ, ಮಿನುಗು ತಾರೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದರು.

ಆಸ್ಪತ್ರೆಯಲ್ಲಿ ಇರುವ ಮೈಕಲ್ ಮಧು ಅವರ ಪಾರ್ಥಿವ ಶರೀರವನ್ನು ನಾಳೆ ಬೆಳಿಗ್ಗೆ ಕಿಮ್ಸ್ ಆಸ್ಪತ್ರೆ ಕುಟುಂಬದವರಿಗೆ ಒಪ್ಪಿಸಲಿದೆ. ಬೆಳ್ಳಿ ಪರದೆಯ ಮೇಲೆ ಶ್…, ಸೂರ್ಯವಂಶ, ಓಂ, ಸೇರಿದಂತೆ ಹಲವು ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳನ್ನು ಮಾಡುವ ಮೂಲಕ ಪ್ರೇಕ್ಷಕರ ಮನಸ್ಸನ್ನು ಗೆದ್ದಂತ ಈ ಹಾಸ್ಯ ನಟನೆಗೆ ಚಿತ್ರೋದ್ಯಮದ ಗಣ್ಯರು ಕಂಬನಿಯನ್ನು ಮಿಡಿದಿದ್ದಾರೆ.

Facebook Comments

Sri Raghav

Admin