Wednesday, April 24, 2024
Homeರಾಜ್ಯಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಮಂಡನೆ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಮಂಡನೆ

ಬೆಂಗಳೂರು, ಫೆ.13- ವಾಣಿಜ್ಯ ಹಾಗೂ ಇತರೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು. ಕನ್ನಡ ಮತ್ತು ಸಂಸ್ಕøತಿ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕ ಮಂಡಿಸಿದರು. ಈ ಮೂಲಕ ರಾಜ್ಯಪಾಲರಿಂದ ತಿರಸ್ಕøತಗೊಂಡಿದ್ದ ಸುಗ್ರೀವಾಜ್ಞೆಗೆ ಕಾನೂನಿನ ರೂಪ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಕನ್ನಡ ನಾಮಫಲಕಗಳ ಕುರಿತು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ ಸಂಘಟನೆ ಉಗ್ರ ಸ್ವರೂಪದ ಹೋರಾಟ ನಡೆಸಿತ್ತು. ಪರಿಸ್ಥಿತಿಯ ಗಂಭೀರತೆ ಅರಿತ ಸರ್ಕಾರ ಸುಗ್ರೀವಾಜ್ಞೆ ಮೂಲಕ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ಸಿಗುವಂತೆ ಮಾಡಲು ಮುಂದಾಗಿತ್ತು. ಆದರೆ ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿ ವಿಧಾನಮಂಡಲದಲ್ಲಿ ವಿಧೇಯಕ ಮಂಡಿಸಿ ಅಂಗೀಕಾರ ಪಡೆದುಕೊಳ್ಳುವಂತೆ ಸೂಚಿಸಿದ್ದರು. ಅದರಂತೆ ಮಸೂದೆ ರೂಪಿಸಲಾಗಿದೆ.

ಎನ್‍ಸಿಪಿ ಹೆಸರು, ಚಿಹ್ನೆಗಾಗಿ ಸುಪ್ರೀಂ ಮೊರೆ ಹೋದ ಶರದ್‍ಪವಾರ್

ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್‍ಗಳು ಮತ್ತು ಮುಂದಾದೆಡೆಗಳಲ್ಲಿ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ, ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ.

ಅಧಿನಿಯಮದ ಸೆಕ್ಷನ್ 13ಕ್ಕೆ ತಿದ್ದುಪಡಿ ತರಲಾಗಿದ್ದು, ಭಾಷಾ ಅನುಷ್ಟಾನ ರಾಜ್ಯ ಸಮಿತಿಗೆ ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ನಿರ್ದೇಶಕರನ್ನು ಸದಸ್ಯರನ್ನಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಚಾಲಕರನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ.

RELATED ARTICLES

Latest News