ರಾಜ್ಯೋತ್ಸವ: ಕೇಂದ್ರ ಸಚಿವರು, ರಾಹುಲ್, ಮಮತಾ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ನ.1- ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕೇಂದ್ರ ಸಚಿವರು , ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕ ಗಣ್ಯರು ಕರುನಾಡ ಜನತೆಗೆ ಶುಭ ಕೋರಿದ್ದಾರೆ.

ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ , ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ, ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕರು ಶುಭ ಹಾರೈಸಿ ರಾಷ್ಟ್ರದ ಪ್ರಗತಿಯಲ್ಲಿ ಕರ್ನಾಟಕದ ಪಾತ್ರವನ್ನು ಶ್ಲಾಘಿಸಿದ್ದಾರೆ.

ಸದೃಢ ರಾಜ್ಯಗಳಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಗಣ್ಯರು ಬಣ್ಣಿಸಿದ್ದಾರೆ. ಕರ್ನಾಟಕದೊಂದಿಗೆ ಇಂದು ಕೇರಳ, ಪಾಂಡಿಚೇರಿ , ಪಂಜಾಬ್, ಹರಿಯಾಣ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಢ ರಾಜ್ಯಗಳಲ್ಲೂ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ರಾಜ್ಯಗಳಿಗೂ ಸಹ ಗಣ್ಯರು ಶುಭ ಕೋರಿದ್ದಾರೆ.

Facebook Comments