ಕನ್ನಡ ರಾಜ್ಯೋತ್ಸವ : ಕನ್ನಡದಲ್ಲೇ ಶುಭಕೋರಿದ ಪ್ರಧಾನಿ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ನ.1- ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡಿಗರಿಗೆ ಕನ್ನಡ ಭಾಷೆಯಲ್ಲೇ ಶುಭಾಶಯ ಕೋರಿದ್ದಾರೆ. ಈ ಕುರಿತ ಟ್ವಿಟ್ ಮಾಡಿರುವ ಅವರು, ಕನ್ನಡ ನಾಡಿನ ಸಾಧನೆ ಮತ್ತು ಸೌಂದರ್ಯವನ್ನು ಪ್ರಶಂಸಿಸಿದ್ದಾರೆ.

ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಕೋರಿದ್ದಾರೆ.

ಪ್ರಧಾನ ಮಂತ್ರಿ ಆದಾಗಿನಿಂದಲೂ ಮೋದಿ ಅವರು ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದ ದಿನದಂದು ಕನ್ನಡದಲ್ಲೇ ಕನ್ನಡಿಗರಿಗೆ ಶುಭ ಕೋರುತ್ತಿರುವುದು ವಿಶೇಷ.

Facebook Comments