ಹಿರಿಯ ನಟಿ ಶಾಂತಮ್ಮ ಇನ್ನಿಲ್ಲ..!

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು: ಕನ್ನಡ ಸೇರಿದಂತೆ ಹಿಂದಿ, ತಮಿಳು ಭಾಷೆಗಳಲ್ಲಿ ನೂರಾರು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟಿ ಬಿ. ಶಾಂತಮ್ಮ(95) ನಿಧನರಾಗಿದ್ದಾರೆ.

ಶಾಂತಮ್ಮ ಅವರು ಕಳೆದ ಹಲವು ವರ್ಷಗಳಿಂದ ಮೈಸೂರಿನ ತಮ್ಮ ಮಗಳ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ಸಂಜೆ ಸುಮಾರು 4 ಗಂಟೆ ಸಮಯದಲ್ಲಿ ಹಠಾತ್ತಾಗಿ ಕುಸಿದುಬಿದ್ದಿದ್ದ ಶಾಂತಮ್ಮ ಅವರನ್ನು ತಕ್ಷಣ ಆಂಬುಲೆನ್ಸ್​​ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ ಉಸಿರಾಟದ ತೊಂದರೆ ಉಂಟಾಗಿತ್ತು ಎನ್ನಲಾಗಿದೆ. ಇವತ್ತು ಸಂಜೆ 5.30ಕ್ಕೆ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

ಶಾಂತಮ್ಮ ,ಅವರು ಚಿನ್ನಾರಿ ಮುತ್ತ, ಚಂದವಳ್ಳಿ ತೋಟ, ಕೆಂಡದ ಮಳೆ, ಬಾಂಬೆ ದಾದಾ, ಗಜೇಂದ್ರ, ಶ್ರುತಿ ಸೇರಿದಾಗ, ಇಂದಿನ ಭಾರತ. ಲಾಕ್​ಅಪ್​ ಡೆತ್​, ರೂಪಾಯಿ ರಾಜ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು.

ನಾಳೆ ಕೋವಿಡ್ 19 ಸ್ವಾಬ್ ಟೆಸ್ಟ್ ಸೇರಿದಂತೆ ಹಲವು ವರದಿಗಳು ಬರಬೇಕಿದ್ದು, ಆ ಬಳಿಕ ಅಂತ್ಯಕ್ರಿಯೆ ಮಾಡುವುದಾಗಿ ಶಾಂತಮ್ಮ ಅವರ ಪುತ್ರಿ ಸುಮ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಂಗಭೂಮಿ ಹಿನ್ನೆಲೆಯಿಂದ ಬಂದ ಶಾಂತಮ್ಮ, ಡಾ. ರಾಜ್​ ಕುಮಾರ್ ಅವರ ಹಲವು ಸಿನಿಮಾಗಳಲ್ಲಿಯೂ ನಟಿಸಿದ್ದರು. ಬಿ. ಜಯಮ್ಮ ಅವರ ಸಂಬಂಧಿಯೂ ಆಗಿದ್ದರು.

ನಟಿ ಶಾಂತಮ್ಮ ಸಾವಿಗೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

Facebook Comments

Sri Raghav

Admin