ಸರ್ಕಾರ ನಡೆಸಲು ಕುಮಾರಸ್ವಾಮಿ ಅಸಮರ್ಥರು, ತಕ್ಷಣ ರಾಜೀನಾಮೆ ನೀಡಲಿ : ಸಂಗಣ್ಣ ಕರಡಿ

ಈ ಸುದ್ದಿಯನ್ನು ಶೇರ್ ಮಾಡಿ

ಕೊಪ್ಪಳ, ಮೇ 24- ಲೋಕಸಭೆ ಜನಾದೇಶ ಸಮ್ಮಿಶ್ರ ಸರ್ಕಾರದ ವಿರುದ್ಧವಾಗಿದ್ದು ಸೋಲಿನ ಹೊಣೆ ಹೊತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಂಸದ ಸಂಗಣ್ಣ ಕರಡಿ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರ ನಡೆಸಲು ಅಸಮರ್ಥರಾಗಿದ್ದು ಕೂಡಲೇ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸೋಲಿನ ಹತಾಶೆಯಿಂದ ಕಾಂಗ್ರೆಸ್‍ನಲ್ಲಿ ಭಿನ್ನಮತ ಹೆಚ್ಚಾಗಿದೆ. ಕಾಂಗ್ರೆಸ್‍ನಲ್ಲಿ ಸಾಕಷ್ಟು ಭಿನ್ನಮತೀಯರಿದ್ದಾರೆ. ಅವರ ಮುಂದಿನ ನಡೆ ಏನು ಎಂದು ನೋಡೋಣ ಎಂದು ತಿಳಿಸಿದರು. ಕಾಂಗ್ರೆಸ್-ಜೆಡಿಎಸ್ ಪಕ್ಷದಲ್ಲಿ ಘಟಾನುಘಟಿ ನಾಯಕರುಗಳೇ ಸೋತಿದ್ದಾರೆ.

ಪ್ರಧಾನಿ ಮೋದಿಯವರನ್ನು ಚೌಕಿದಾರ್ ಚೋರ್ ಎಂದಾಗಲೇ ಅವರನ್ನು ಸೋಲಿಸಬೇಕೆಂದು ಜನ ನಿರ್ಧಾರ ಮಾಡಿದರು. ಸಿದ್ದರಾಮಯ್ಯನವರ ಆಪ್ತರೆಲ್ಲರೂ ಸೋತು ಮಲಗಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಸಂಗಣ್ಣ ಲೇವಡಿ ಮಾಡಿದರು.

ಸದ್ಯದಲ್ಲೇ ಮೈತ್ರಿ ಸರ್ಕಾರ ಹೋಗಿ ನಮ್ಮ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin