ಹುತಾತ್ಮ ಯೋಧರ ಕುಟುಂಬದೊಂದಿಗೆ ನಮ್ಮ ಸರ್ಕಾರ ಸದಾ ಇರುತ್ತದೆ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ದೇಶದ ರಕ್ಷಣೆಗಾಗಿ ತಮ್ಮ ಜೀವವನ್ನೇ ತ್ಯಾಗ ಮಾಡಿದ ಹುತಾತ್ಮ ಯೋಧರ ಕುಟುಂಬದೊಂದಿಗೆ ನಮ್ಮ ಸರ್ಕಾರವಿದೆ. ಅವರ ಕುಟುಂಬಕ್ಕೆ ಎಲ್ಲ ಸೌಲಭ್ಯ ಒದಗಿಸಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಕಾರ್ಗಿಲ್ ವಿಜಯದಲ್ಲಿ ಹುತಾತ್ಮರಾದವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ರಾಷ್ಟ್ರೀಯ ಮಿಲಿಟರಿ ಸ್ಮಾರಕ ಶ್ರೀಮತಿ ಇಂದಿರಾಗಾಂಧಿ ಸಂಗೀತ ಕಾರಂಜಿ ಉದ್ಯಾನವನ ನೆಹರು ತಾರಾಲಯದ ಎದುರು ಗೌರವ ಸಮರ್ಪಣೆ ಕಾರ್ಯಕ್ರಮ ಜರುಗಿತು.

ನಂತರ ಕಾರ್ಗಿಲ್ ವಿಜಯ್ ದಿವಸ್ ಉದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಗಿಲ್ ವಿಜಯ್ ದಿವಸ್‍ನಲ್ಲಿ ಹೆಮ್ಮೆಯಿಂದ ಪಾಲ್ಗೊಂಡಿದ್ದೇನೆ.

ಭಾರತ ಮಾತೆಯ ರಕ್ಷಣೆಗಾಗಿ ತಮ್ಮ ಜೀವವನ್ನೇ ಸಮರ್ಪಿಸಿಕೊಂಡ ಭಾರತೀಯ ಯೋಧರ ಶೌರ್ಯ ಮತ್ತು ತ್ಯಾಗಕ್ಕೆ ಸದಾ ಕೃತಜ್ಞರಾಗಿದ್ದೇವೆ ಎಂದರು.

ನಾವೆಲ್ಲರೂ ಇಂದು‌ ಹುತಾತ್ಮರಾದವರಿಗೆ ನಮನ ಸಲ್ಲಿಸಲು ಭಾಗವಹಿಸಿದ್ದೇವೆ. ಭಾರತೀಯ ಯೋಧರ ಶೌರ್ಯ, ತ್ಯಾಗಕ್ಕೆ ಸದಾ ಕೃತಜ್ಞರಾಗಿದ್ದೇವೆ. ದೇಶದ ಕಾರ್ಗಿಲ್ ಪ್ರದೇಶವನ್ನ ಪಾಕಿಸ್ತಾನ ಆಕ್ರಮಿಸಿಕೊಂಡಿತ್ತು.

ಆಗ ಅಸಾಧ್ಯದ ವಾತಾವರಣದಲ್ಲಿ ಯೋಧರು ಕೆಚ್ಚೆದೆಯಿಂದ ಸತತವಾಗಿ ಹೋರಾಡಿ ಆ ಪ್ರದೇಶವನ್ನು ಮರು ವಶಪಡಿಸಿಕೊಂಡರು.ಹುತಾತ್ಮರಾಗಿದ್ದ ಯೋಧರು ಹಾಗೂ ಮಾಜಿ ಸೈನಿಕರಿಗೆ ಸರ್ಕಾರ ಸದಾ ನೆರವು ನೀಡುತ್ತೆ.

ದೇಶ ರಕ್ಷಣೆ ಮಾಡುವ ಸೈನಿಕರ ಪರ ನಿಲ್ಲಲು ಸರ್ಕಾರ ಸದಾ ಸಿದ್ಧವಿದೆ. ಹುತಾತ್ಮ ಕಾರ್ಗಿಲ್ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ ಅವರ ನೆರವಿಗೆ ಸರ್ಕಾರ ಸದಾ ಸಿದ್ಧವಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಭಾರತ ಮಾತೆಗಾಗಿ ಜೀವ ಸಮರ್ಪಿಸಿಕೊಂಡ ಯೋಧನಿಗೆ ಸದಾ ಕೃತಜ್ಞರಾಗಿದ್ದೇವೆ. ಕಾರ್ಗಿಲ್ ಅತ್ಯಂತ ದುರ್ಗಮ ಪ್ರದೇಶವಾಗಿತ್ತು.1999 ಮೇ 5 ರಿಂದ ಜುಲೈ 26 ವರಗೆ ಹೋರಾಟ ನಡೆಸಿ ಭಾರತಿಯ ಸೈನಿಕರು ಶತ್ರುಗಳನ್ನು ಹಿಮ್ಮೆಟ್ಟಿಸಿ ವಿಜಯಿಯಾದರು. ಇಡೀ ದೇಶ ರಕ್ಷಣೆ ಮಾಡಿದ ಯೋಧರ ಸಾಹಸಗಾತೆ ಯುವ ಪೀಳಿಗೆಗೆ ಎಂದಿಗೂ ಸ್ಪೂರ್ತಿಯಾಗಿದೆ ಎಂದರು.

ಪ್ರವಾಹ, ಭೂಕಂಪ, ಸುನಾಮಿಯಂತ ವಿಪತ್ತಿನಲ್ಲಿ ನಾಡಿನ ರಕ್ಷಣೆಗೆ ಧಾವಿಸುವ ಯೋದರ ಸಾಹಸ ಅನುಕರಣೀಯ. ಕಾರ್ಗಿಲ್ ಯುದ್ದದಲ್ಲಿ ಹುತಾತ್ಮರಾದ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ. ಅವರ ನೆರವಿಗೆ ನಮ್ಮ‌ಸರ್ಕಾರ ಸದಾ ಬದ್ದ ಎಂದು ಹೇಳಿದರು.

ಕರ್ನಾಟಕದ 16 ಸೈನಿಕರು ಸೇರಿದಂತೆ ಒಟ್ಟು 527 ಸೈನಿಕರು ತಮ್ಮ ಪ್ರಾಣವನ್ನು ಬಲಿಕೊಟ್ಟಿದ್ದಾರೆ. ಇಡೀ ದೇಶ ರಕ್ಷಣೆ ಮಾಡಿದ ಯೋಧರ ಸಾಹಸಗಾಥೆ ಯುವ ಪೀಳಿಗೆಗೆ ಎಂದಿಗೂ ಸ್ಪೂರ್ತಿ.

ಪ್ರವಾಹ, ಭೂಕಂಪ, ಸುನಾಮಿಯಂತ ವಿಪತ್ತಿನಲ್ಲಿ ನಾಡಿನ ರಕ್ಷಣೆಗೆ ಧಾವಿಸುವ ಯೋಧರ ಸಾಹಸ ಅನುಕರಣೀಯ. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಕೆಚ್ಚೆದೆಯ ಯೋಧರ ಪರಂಪರೆಯನ್ನು ಮುಂದುವರಿಸುವ ಪಣ ತೊಡೋಣ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ನಗರ ಪೊಲೀಸ್​ ಆಯುಕ್ತ ಭಾಸ್ಕರ್ ರಾವ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರು ಕಾರ್ಗಿಲ್ ಹುತಾತ್ಮ ಯೋಧರಿಗೆ, ರಾಷ್ಟ್ರೀಯ ಮಿಲಿಟರಿ ಸ್ಮಾರಕದ ಎದುರು ನಮನ ಸಲ್ಲಿಸಿದರು. ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಹಾಗೂ ಗೃಹ ಸಚಿವ ಬೊಮ್ಮಾಯಿ ಸಾಥ್ ನೀಡಿದರು.

Facebook Comments

Sri Raghav

Admin