LIVE : ಕರ್ನಾಟಕ ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.5- ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಕನ್ನಡಿಗರ ಆಕ್ರೋಶ ಮುಗಿಲುಮುಟ್ಟಿದೆ. ನಿಗಮ ರದ್ದುಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಸಾವಿರಾರು ಕನ್ನಡ ಪರ ಸಂಘಟನೆಗಳ ಮುಖಂಡರಾದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಸೇರಿದಂತೆ ಸಾವಿರಾರು ಕಾರ್ಯಕರ್ತರನ್ನು ವಿವಿಧೆಡೆ ಪೊಲೀಸರು ವಶಕ್ಕೆ ಪಡೆದರು.

ಮರಾಠ ಅಭಿವೃದ್ಧಿ ನಿಗಮ ವಿರೋಸಿ ಕನ್ನಡ ಒಕ್ಕೂಟ ಕರೆ ಕೊಟ್ಟಿದ್ದ ರಾಜ್ಯ ಬಂದ್‍ಗೆ ಇಂದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ ವಿವಿಧ ಜಿಲ್ಲೆಗಳಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಕಾವು ಹೆಚ್ಚಾಗಿತ್ತು.

ರಸ್ತೆ, ಬಸ್ ತಡೆ ಪ್ರಯತ್ನ, ಟೈರ್‍ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ, ಧರಣಿ, ರ್ಯಾಲಿ, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ, ಬೆಂಗಳೂರಿನ ಹೊರವಲಯದ ಚಂದಾಪುರದಲ್ಲಿ ಬಿಎಂಟಿಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದನ್ನು ಹೊರತುಪಡಿಸಿದರೆ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ.

ರಾಜಧಾನಿ ಬೆಂಗಳೂರಿನ ಟೌನ್‍ಹಾಲ್, ಗಾಂನಗರ, ಶಿವಾನಂದ ವೃತ್ತದ ಬಳಿ ಪ್ರತಿಭಟನಾ ಕಾವು ಜೋರಾಗಿತ್ತು. ಪೊಲೀಸ್ ಸರ್ಪಗಾವಲು ಕೂಡ ಹೆಚ್ಚಾಗಿತ್ತು. ಟೌನ್‍ಹಾಲ್‍ನಿಂದ ಫ್ರೀಡಂಪಾರ್ಕ್‍ವರೆಗೆ ಕನ್ನಡ ಒಕ್ಕೂಟದ ಮುಖಂಡರಾದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಟೌನ್‍ಹಾಲ್ ಬಳಿ ಜಮಾಯಿಸಿದ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

 

ಪ್ರತಿಭಟನೆಗೆ ಆಗಮಿಸಿದ ಕನ್ನಡ ಒಕ್ಕೂಟದ ಮುಖಂಡರಾದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು, ಕನ್ನಡ ಸೇನೆಯ ಕೆ.ಆರ್.ಕುಮಾರ್, ಕನ್ನಡ ಜಾಗೃತಿ ವೇದಿಕೆ, ಕರವೇ ಶಿವರಾಮೇಗೌಡ ಬಣ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಮಲ್ಲೇಶ್ವರಂನ ಕುವೆಂಪು ವೃತ್ತದಲ್ಲಿ ಬೆಳಗ್ಗೆ ಪ್ರತಿಭಟನೆ ನಡೆಸಲು ಮುಂದಾದ 20 ಜನ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಅವರು ಬಂದ್ ವಿಫಲಗೊಳಿಸುವ ಪ್ರಯತ್ನವನ್ನು ಸರ್ಕಾರ ಮಾಡಿದೆ. 20 ರಿಂದ 25 ಸಾವಿರಕ್ಕೂ ಹೆಚ್ಚು ಕನ್ನಡಪರ ಹೋರಾಟಗಾರರನ್ನು ಬಂಸಿದೆ.

 

ಮಫ್ತಿಯಲ್ಲಿ ಪೊಲೀಸರು ಹೋಗಿ ಕಾರ್ಯಕರ್ತರನ್ನು ಬಂಸಿದ್ದಾರೆ. ಬಂದ್ ಮಾಡದಂತೆ ಹೆದರಿಸಿ ಪಿತೂರಿ ಮಾಡಿದ್ದಾರೆ. ಆದರೂ ನಮ್ಮ ಬಂದ್ ಯಶಸ್ವಿಯಾಗಿದೆ ಎಂದು ಹೇಳಿದರು. ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ಕಾರ್ಯಕರ್ತರನ್ನು ಮೌರ್ಯ ಸರ್ಕಲ್ ಬಳಿಯೇ ಪೊಲೀಸರು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣಗೌಡ ಅವರು, ನಮ್ಮ ನಾಡಪರ ಹೋರಾಟವನ್ನು ನಾವು ನಿಲ್ಲಿಸುವುದಿಲ್ಲ.

ಪೊಲೀಸರ ಬಲ ಪ್ರಯೋಗದಿಂದ ನಾವು ಹೋರಾಟಕ್ಕೆ ಜಗ್ಗುವುದಿಲ್ಲ. ನಮ್ಮ ಮೇಲೆ ಈಗಾಗಲೇ ಹಲವು ಪ್ರಕರಣಗಳಿವೆ. ಇನ್ನೂ ನೂರು ಪ್ರಕರಣಗಳಾದರೂ ನಾವು ಹೆದರುವುದಿಲ್ಲ. ಭಾಷಾ ಅಲ್ಪ ಸಂಖ್ಯಾತರ ಓಲೈಕೆಗಾಗಿ ಸರ್ಕಾರ ಕನ್ನಡಿಗರ ಹಿತಾಸಕ್ತಿಯನ್ನು ಬಲಿ ಕೊಡುತ್ತಿದೆ. ಇದರ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಎಚ್ಚರಿಸಿದರು.

 

ಪೊಲೀಸರಿಂದ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಇದು ಸಫಲವಾಗುವುದಿಲ್ಲ. ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಕೆ.ಆರ್.ಕುಮಾರ್ ತಿಳಿಸಿದರು. ಅತ್ತ ಅತ್ತಿಬೆಲೆ ಗಡಿಯಲ್ಲಿ ಕನ್ನಡ ಜಾಗೃತಿ ವೇದಿಕೆ ವತಿಯಿಂದ ಮಂಜುನಾಥ್ ದೇವು ರಸ್ತೆತಡೆ ಮಾಡಿ ಪ್ರತಿಭಟನೆ ನಡೆಸಿದರೆ, ಬಳ್ಳಾರಿ ರಸ್ತೆಯಲ್ಲಿ ಪ್ರವೀಣ್‍ಕುಮಾರ್ ಶೆಟ್ಟಿ ರಾಷ್ಟ್ರೀಯ ಹೆದ್ದಾರಿ ತಡೆ ಮಾಡುವ ಮೂಲಕ ಪ್ರತಿಭಟನೆ ಮಾಡಿದರು.

ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ರಾಮನಗರ, ಮಂಡ್ಯ, ಬೆಳಗಾವಿ, ರಾಯಚೂರು, ಚಿತ್ರದುರ್ಗ, ಚಿಕ್ಕಮಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಯಿತು.  ಕೊಪ್ಪಳದಲ್ಲಿ ಕನ್ನಡಪರ ಹೋರಾಟಗಾರರು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

 

ಮಂಡ್ಯದಲ್ಲಿ ಎಮ್ಮೆ, ಕಬ್ಬಿನ ಜಲ್ಲೆಗಳನ್ನು ಹಿಡಿದು ಪ್ರತಿಭಟನಾಕಾರರು ಆಗಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಗದಗ-ಹುಬ್ಬಳ್ಳಿ ರಸ್ತೆ ಬಂದ್ ಮಾಡಿ ತಮಟೆ ಬಾರಿಸಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಚಿತ್ರದುರ್ಗದಲ್ಲಿ ಗಾಂ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಬಸ್ ತಡೆಯಲು ಮುಂದಾದ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಉಡುಪಿ, ದಾವಣಗೆರೆ, ರಾಯಚೂರು ಭಾಗಗಳಲ್ಲಿ ಬಂದ್ ಬಿಸಿ ಅಷ್ಟಾಗಿ ತಟ್ಟಿರಲಿಲ್ಲ. ಈ ಭಾಗದ ಕನ್ನಡಪರ ಹೋರಾಟಗಾರರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ರ್ಯಾಲಿ ನಡೆಸಿ ಪ್ರತಿಭಟಿಸಿ ಮರಾಠ ಅಭಿವೃದ್ಧಿ ನಿಗಮ ರದ್ದುಮಾಡುವಂತೆ ಮನವಿ ಸಲ್ಲಿಸಿದರು.

 

Facebook Comments

Sri Raghav

Admin