ಮೋದಿ ಕುರಿತ ವಿವಾದಿತ ಟ್ವೀಟ್ ಹಿಂಪಡೆದ ಕಾಂಗ್ರೆಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.19- ಪ್ರಧಾನಿ ನರೇಂದ್ರ ಮೋದಿಯನ್ನು ಹೆಬ್ಬೆಟ್ ಗಿರಾಕಿ ಎಂದು ಟೀಕಿಸಿದ್ದ ಟ್ವೀಟ್ ಅನ್ನು ಕಾಂಗ್ರೆಸ್ ಹಿಂಪಡೆದಿದೆ.
ನಿನ್ನೆ ಸಾಮಾಜಿಕ ಜಾಲ ತಾಣಗಳಲ್ಲಿ ಬಿಜೆಪಿ-ಕಾಂಗ್ರೆಸ್‍ನ ನಡುವೆ ಟ್ವೀಟ್ ವಾರ್ ನಡೆದಿತ್ತು. ರಾಹುಲ್‍ಗಾಂಧಿಯನ್ನು ಟೀಕಿಸಿದ್ದಕ್ಕೆ ತಿರುಗೇಟು ನೀಡುವ ಭರದಲ್ಲಿ ಕಾಂಗ್ರೆಸ್ ಮೋದಿಯನ್ನು ಹೆಬ್ಬೆಟ್ ಗಿರಾಕಿ ಎಂದು ಲೇವಡಿ ಮಾಡಿತ್ತು.

ಇದಕ್ಕೆ ಸಾಮಾಜಿಕ ಜಾಲ ತಾಣದಲ್ಲಿ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದ್ದವು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಿವಾದಿತ ಟ್ವೀಟ್‍ಗೆ ವಿಷಾದ ವ್ಯಕ್ತ ಪಡಿಸಿದ್ದರು. ಆಗಿರುವ ಆಪಚಾರಕ್ಕೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದರು.

ಅದರ ಬೆನ್ನಲ್ಲೆ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ವಿಷಾದ ವ್ಯಕ್ತ ಪಡಿಸಿದೆ. ನಮ್ಮ ಹೋರಾಟ ಸದಾ ಜನಪರ, ನೈತಿಕ ಹಾಗೂ ಸೈದ್ಧಾಂತಿಕ ನೆಲೆಗಟ್ಟಿನಲ್ಲಿರುತ್ತದೆ. ತಾವು ಅಧಿಕಾರಕ್ಕೆ ಬಂದರೆ ಅಚ್ಚೇದಿನ್ ತರುವುದಾಗಿ ಹೇಳಿದ್ದ ಬಿಜೆಪಿ ಸರ್ಕಾರವನ್ನು ಉತ್ತರದಾಯಿಯನ್ನಾಗಿಸುವುದು ಕಾಂಗ್ರೆಸ್ ಪಕ್ಷದ ಕರ್ತವ್ಯ. ಈ ಪ್ರಯತ್ನದಲ್ಲಿ ಅಪ್ರಬುದ್ಧ ಪದ ಬಳಕೆಗೆ ನಾವು ವಿಷಾದ ವ್ಯಕ್ತ ಪಡಿಸುತ್ತಾ, ಅದನ್ನು ಹಿಂಪಡೆದಿದ್ದೇವೆ ಎಂದು ತಿಳಿಸಲಾಗಿದೆ.

Facebook Comments