ಬ್ರೇಕಿಂಗ್ : ರಾಜ್ಯದಲ್ಲಿಂದು 47563 ಹೊಸ ಕೇಸ್, 482 ಮಂದಿ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಗಿಲುಮುಟ್ಟಿದ್ದು ಇಂದು 482 ಜೀವಗಳನ್ನು ಬಲಿ ಪಡೆದು ಸಾವಿನ ಕೇಕೆ ಹಾಕಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 47563 ಹೊಸ ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1886448 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 18286ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ ಕೊರೋನಾ ಮಾಹಾಸ್ಪೋಟವಾಗಿದ್ದು 21534 ಜನರಿಗೆ ಕೊರೋನಾ ತಗುಲಿದ್ದು, 285 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 929996 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 7776 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು ರಾಜ್ಯಾದ್ಯಂತ 34881 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 1319301 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಜಿಲ್ಲಾವಾರು ಸೋಂಕಿತ ಸಂಖ್ಯೆ ಕೆಳಕಂಡಂತಿದೆ :

Facebook Comments

Sri Raghav

Admin