ಸಾಲಮನ್ನಾ ಋಣಮುಕ್ತ ಪತ್ರ ವಿತರಣೆ ಮಹೂರ್ತ ಫಿಕ್ಸ್..!

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--011

ಬೆಂಗಳೂರು, ಡಿ.7-ರೈತರ ಬೆಳೆ ಸಾಲ ಮನ್ನಾ ಯೋಜನೆಯ ಋಣಮುಕ್ತ ಪತ್ರ ವಿತರಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಡಿ.8 ರಂದು ಮಧ್ಯಾಹ್ನ 2 ಗಂಟೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಭಗತ್‍ಸಿಂಗ್ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ರೈತರ ಬೆಳೆ ಸಾಲ ಮನ್ನಾ ಯೋಜನೆ ಋಣಮುಕ್ತ ಪತ್ರ ಪ್ರದಾನ ಮಾಡಲಿದ್ದಾರೆ.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಡಿ.ಕೆ.ಶಿವಕುಮಾರ್, ಕೃಷ್ಣಭೈರೇಗೌಡ, ಕೆ.ಜೆ.ಜಾರ್ಜ್, ಬಂಡೆಪ್ಪ ಕಾಶಂಪುರ್, ಎನ್.ಎಚ್.ಶಿವಶಂಕರ್‍ರೆಡ್ಡಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದ ರೈತರ ಕೃಷಿ ಸಾಲ ಮನ್ನಾವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್‍ನಲ್ಲಿ ಮನ್ನಾ ಮಾಡಿದ್ದರು. ಆದರೆ ಅದರ ಅನುಷ್ಠಾನ ವಿಳಂಬವಾಗುತ್ತಿರುವ ಬಗ್ಗೆ ವ್ಯಾಪಕ ಆಕ್ಷೇಪಗಳು ಕೇಳಿ ಬಂದಿವೆ. ಕೆಲವು ಬ್ಯಾಂಕ್‍ಗಳು ಸಾಲ ಮನ್ನಾ ಯೋಜನೆ ಪರಿಗಣಿಸದೆ ರೈತರಿಗೆ ನೋಟೀಸ್ ನೀಡುತ್ತಿದ್ದು, ಕೆಲವರಿಗೆ ಬಂಧನದ ವಾರೆಂಟ್ ಕೂಡ ಜಾರಿಯಾಗಿದೆ.

ಹೀಗಾಗಿ ಸಾಲ ಮನ್ನಾ ಯೋಜನೆ ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ ಎಂಬ ಆಕ್ಷೇಪಗಳು ಕೇಳಿ ಬಂದಿವೆ. ಇದನ್ನು ನಿವಾರಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ನಾಳೆಯಿಂದಲೇ ಋಣಮುಕ್ತ ಪತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. ನಾಳೆಯಿಂದಲೇ ಈ ಯೋಜನೆಗೆ ಚಾಲನೆ ಸಿಗುತ್ತದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin