ರಾಜ್ಯಪಾಲರಿಗೆ ಕೊರೋನಾ ನೆಗೆಟಿವ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.3- ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿದ ಪರಿಣಾಮವಾಗಿ ಪರೀಕ್ಷೆಗೊಳಗಾದ ರಾಜ್ಯಪಾಲ ವಾಜುಬಾಯಿವಾಲಾ ಅವರ ವರದಿ ಬಂದಿದ್ದು ಸೋಂಕಿಲ್ಲ ಎಂದು ಸ್ಪಷ್ಟವಾಗಿದೆ.

ಜುಲೈ 31 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯಪಾಲರನ್ನು ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ತಪಾಸಣೆಗೆ ಒಳಪಡಿಸಲಾಗಿದ್ದು ಅವರಿಗೆ ಕೊರೊನಾ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ.

ಹೀಗಾಗಿ ರಾಜ್ಯಪಾಲರು ನಿರಾಳರಾಗಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್-19 ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಆಪ್ತರು, ಅವರ ಸಂಪರ್ಕಿತರು ಹಾಗೂ ಅವರನ್ನು ಭೇಟಿ ಮಾಡಿರುವ ಎಲ್ಲರನ್ನೂ ಪರೀಕ್ಷೆಗೊಳಪಡಿಸಲಾಗಿದೆ.

ಸಿಎಂರ ಆಪ್ತ ಸಿಬ್ಬಂದಿ ಮತ್ತು ಅವರ ಕುಟುಂಬದವರು ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ, ಇವರು ಕೂಡ ಚಿಕಿತ್ಸೆಗೆ ದಾಖಲಾಗಿದ್ದಾರೆ. ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಎಚ್‍ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments

Sri Raghav

Admin