ಆರ್ಥಿಕ ಪರಿಸ್ಥಿತಿ ನಿಭಾಯಿಸಲು 12 ಸಾವಿರ ನಿವೇಶನಗಳ ಹರಾಜಿಗೆ ಮುಂದಾದ ರಾಜ್ಯ ಸರ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಲಾಕ್ ಡೌನ್ ಅನುಷ್ಠಾನ ಮಾಡಿದ ಪರಿಣಾಮ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವುದರಿಂದ
ಬಿಡಿಎ ವ್ಯಾಪ್ತಿಯಲ್ಲಿ 12 ಸಾವಿರ ಕಾರ್ನರ್ ನಿವೇಶನಗಳನ್ನು ಹರಾಜು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

12 ಸಾವಿರ ನಿವೇಶನಗಳನ್ನು ಮಾರಾಟ ಮಾಡುವುದರಿಂದ ಸುಮಾರು15 ಸಾವಿರ ಕೋಟಿ‌ ರೂ ಆದಾಯ ನಿರೀಕ್ಷೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗೋಷ್ಡಿಯಲ್ಲಿ ತಿಳಿಸಿದರು.ಅನಧಿಕೃತ ಕಟ್ಟಡಗಳ ಸಂಬಂಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಲೇವಾರಿಗೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹಲವು ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ.‌ ಸದ್ಯ ರಾಜ್ಯದ ಆರ್ಥಿಕ ಸ್ಥಿತಿ‌ ಸರಿಯಿಲ್ಲ. ಇದನ್ನು ಮತ್ತೆ ಸುಸ್ಥಿಗೆ ತರಲು ‌ಎಲ್ಲ ಪ್ರಯತ್ನ ಮಾಡಲಾಗುತ್ತಿದೆ ಎಂದು ನುಡಿದರು.ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ ಚಿಂತನೆ ಇದೆ. ಏಪ್ರಿಲ್ 14 ರ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು.

ಜೊತೆಗೆ ರಾಜ್ಯಾದ್ಯಂತ ಉಚಿತ ಹಾಲು ವಿತರಣೆ ಒಂದು ವಾರ ವಿಸ್ತರಣೆ ಮಾಡಲಾಗಿದೆ ಎಂದು ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ ಲಾಕ್ಡೌನ್ ಸಡಿಲಗೊಳಿಸಬೇಕೆ ಬೇಡವೆ ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ. ಪ್ರಧಾನಿ ಮೋದಿ ಸಲಹೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದಾಗಿ ಸ್ಪಷ್ಟಪಡಿಸಿದರು.

ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ನೀಡಬೇಕಿರುವ ಬಾಕಿ ಹಣ 2834 ಕೋಟಿ ರೂ ಕೂಡಲೇ ಪಾವತಿಸಲು ಸೂಚಿಸಲಾಗಿದೆ. ಈ ಬಗ್ಗೆ ಗಮನ ಹರಿಸದಿದ್ದರೆ ಸರ್ಕಾರ ಕಠಿಣ ಕ್ರಮ‌ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.  ರಾಯಚೂರು, ಕೊಪ್ಪಳ ಜಿಲ್ಲೆಯಲ್ಲಿ ಆಲಿಕಲ್ಲು‌ ಮಳೆಯಿಂದ ಭತ್ತದ ಬೆಳೆ ನಾಶವಾಗಿದೆ. ಈ ಭಾಗದ ರೈತರಿಗೆ ಪರಿಹಾರ ನೀಡಲು 45 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದರು.

Facebook Comments

Sri Raghav

Admin