ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.11-ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 1978ರ ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 1978ರ ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ಕಲಂ 78, 79 ಕಾಯ್ದೆಗೆ ತಿದ್ದುಪಡಿ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಮಾಧುಸ್ವಾಮಿ , ಉತ್ತರಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಬೇರೆ ಯಾವುದೇ ರಾಜ್ಯಗಳಲ್ಲಿ ಈ ಕಾಯ್ದೆಗೆ ತಿದ್ದುಪಡಿ ಮಾಡಲಾಗಿಲ್ಲ.

ಬೇರೆ ಯಾವುದೇ ರಾಜ್ಯಗಳಲ್ಲಿ ಕಾಯ್ದೆಗೆ ತಿದ್ದುಪಡಿ ಮಾಡಿಲ್ಲ. 45 ವರ್ಷಗಳಿಂದ ರೈತರಿಗೆ ಉಂಟಾಗುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆ ತಪ್ಪಿಸುವ ಉದ್ದೇಶದಿಂದ ಈ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು.

ಇನ್ನು ಮುಂದೆ ಒಂದೇ ಕುಟುಂಬದಲ್ಲಿ ಐವರು ಸದಸ್ಯರಿದ್ದರೆ 108 ಎಕರೆಗಿಂತ ಹೆಚ್ಚು ಜಮೀನು ಖರೀದಿಸುವಂತಿಲ್ಲ. ಇದಕ್ಕೆ ಆದಾಯ ಮಿತಿಯನ್ನು ಹೇರಿಲ್ಲ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ತಿದ್ದುಪಡಿ ಮಾಡಲಾಗಿದೆ.

ಇಂದು ಸಂಪುಟದಲ್ಲಿ ತಾರ್ಕಿಕ ಒಪ್ಪಿಗೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಸಮಗ್ರವಾಗಿ ಚರ್ಚಿಸಿ ಕಾಯ್ದೆಯನ್ನು ಜಾರಿಗೆ ತರಲಿದ್ದೇವೆ ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಸಚಿವ ಅಶೋಕ್, ಈ ಕಾಯ್ದೆಗೆ 1982ರಲ್ಲಿ ಬದಲಾವಣೆ ಮಾಡಲು ಅಂದಿನ ಸರ್ಕಾರ ಮುಂದಾಗಿತ್ತು.

ಹೆಚ್ಚು ಜಮೀನು ಹೊಂದಿದವರು ಕೃಷಿ ಚಟುವಟಿಕೆ ಹೆಸರಿನಲ್ಲಿ ರೈತರಿಗೆ ಕಿರುಕುಳ ನೀಡುತ್ತಿದ್ದರು. ಹೈಕೋರ್ಟ್ ನಿರ್ದೇಶನವಿದೆ. ಇದನ್ನು ಅಂಗೀಕಾರ ಮಾಡುವಂತೆ ಸೂಚನೆ ನೀಡಿತ್ತು. ಹೀಗಾಗಿ ಕಾಯ್ದೆಗೆ ತಿದ್ದುಪಡಿ ತರುವುದು ಅನಿವಾರ್ಯವಾಗಿತ್ತು ಎಂದರು.

ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ಪರಿಣಾಮ ಮುಂದೂಡಲ್ಪಟ್ಟಿದ್ದ ಸಹಕಾರಿ ಸಂಘಗಳ ಚುನಾವಣೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಸಕ್ಕರೆ ಕಾರ್ಖಾನೆಯನ್ನು ಹೊರತುಪಡಿಸಿ ಉಳಿದ ಸಹಕಾರ ಸಂಘಗಳಿಗೆ ಚುನಾವಣೆ ನಡೆಸಬಹುದು.

ಸಕ್ಕರೆ ಕಾರ್ಖಾನೆಯಲ್ಲಿ 4 ರಿಂದ 5 ಜನ ಇರುತ್ತಾರೆ. ಅಲ್ಲಿ ಒಬ್ಬರಿಂದ ಒಬ್ಬರಿಗೆ ಸೋಂಕು ಹಬ್ಬಬಹುದೆಂಬ ಕಾರಣಕ್ಕಾಗಿ ಈ ತೀರ್ಮಾನ ಕೈಗೊಂಡಿದೆ.

Facebook Comments