ನಾಳೆ ಮನೆಯಿಂದ ಹೊರಬಂದರೆ ಲಾಕ್ ಆಗ್ತೀರಾ ಹುಷಾರ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 23- ನಾಳೆ ಮನೆಯಿಂದ ಯಾರೂ ಹೊರಗೆ ಬರಬಾರದು. ಒಂದು ವೇಳೆ ಅನಗತ್ಯವಾಗಿ ಓಡಾಡಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ಎಚ್ಚರಿಸಿದ್ದಾರೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾಳೆ ನಗರವನ್ನು ಸಂಪೂರ್ಣ ಲಾಕ್‍ಡೌನ್ ಮಾಡಲಾಗಿದೆ. ಇದನ್ನು ಪ್ರತಿಯೊಬ್ಬರೂ ತಪ್ಪದೆ ಪಾಲಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲ ಸೇವೆಗಳನ್ನೂ ಸ್ತಬ್ಧಗೊಳಿಸಲಾಗುವುದು. ಮಾರುಕಟ್ಟೆಗಳನ್ನು ಬಂದ್ ಮಾಡಲಾಗುವುದು. ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದರು.

ಲಾಕ್‍ಡೌನ್-1ರ ಸಂದರ್ಭದಲ್ಲಿ ನಗರ ಹೇಗಿತ್ತೋ ಅದೇ ಮಾದರಿಯಲ್ಲಿ ಲಾಕ್‍ಡೌನ್-4 ಇರುತ್ತದೆ. ಇಡೀ ನಗರದಲ್ಲಿ ಬಿಬಿಎಂಪಿ ಮತ್ತು ಪೊಲೀಸ್ ಅಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಅನಗತ್ಯವಾಗಿ ಓಡಾಟ ನಡೆಸಿ ನಿಯಮ ಮೀರಿದರೆ ತಕ್ಷಣ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗುವುದು. ಹೀಗಾಗಿ ಸಾರ್ವಜನಿಕರು ಮನೆಯಲ್ಲೇ ಇದ್ದು ಮಹಾಮಾರಿ ಕೊರೊನಾ ಓಡಿಸುವ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದು ಅನಿಲ್‍ಕುಮಾರ್ ಮನವಿ ಮಾಡಿಕೊಂಡಿದ್ದಾರೆ.

Facebook Comments

Sri Raghav

Admin