Friday, April 19, 2024
Homeರಾಜ್ಯಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ ಹಗುರ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ ಹಗುರ ಮಳೆ

ಬೆಂಗಳೂರು,ಡಿ.17- ಬಂಗಾಳಕೊಲ್ಲಿಯಲ್ಲಿ ಲಘು ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಆದರೆ ಭಾರೀ ಮಳೆಯಾಗುವ ಲಕ್ಷಣ ಗೋಚರಿಸುತ್ತಿಲ್ಲ. ಒಂದೆರೆಡು ಕಡೆ ಚದುರಿದಂತೆ ಹಗುರ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯಾದ್ಯಂತ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸುತ್ತಿದೆ.

ಇದರಿಂದ ಚಳಿ ಅನುಭವ ಹೆಚ್ಚಾಗಿ ಕಂಡುಬರುತ್ತಿದೆ. ಅಲ್ಲದೆ, ಬಹಳಷ್ಟು ಕಡೆ ಸಂಜೆ ಹಾಗೂ ಬೆಳಿಗ್ಗೆ ಹೆಚ್ಚಿನ ಪ್ರಮಾಣದಲ್ಲಿ ಇಬ್ಬನಿ ಬೀಳುತ್ತಿದೆ. ಉತ್ತರ ಕರ್ನಾಟಕ ಸೇರಿದಂತೆ ಕೆಲವೆಡೆ ಬೆಳಗಿನ ಜಾವ ದಟ್ಟವಾದ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ.

ವಾಯುಭಾರ ಕುಸಿತದ ಪರಿಣಾಮದಿಂದ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿರುವುದರಿಂದ ಮಬ್ಬು ಕವಿದ ವಾತಾವರಣ ಸೃಷ್ಟಿಯಾಗಿದೆ. ಆದರೆ ತಮಿಳುನಾಡಿನ ದಕ್ಷಿಣ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದರು.

ಸಂಸತ್‍ನ ಭದ್ರತಾ ಲೋಪ : ಕೊನೆಗೂ ಮೌನ ಮುರಿದ ಮೋದಿ

ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣ ಇರುವುದರಿಂದ ಕನಿಷ್ಟ ತಾಪಮಾನದಲ್ಲೂ ಗಣನೀಯವಾಗಿ ಇಳಿಕೆಯಾಗಿದೆ. 14 ಡಿಗ್ರಿ ಸೆಲ್ಶಿಯಸ್‍ನಿಂದ 18 ಡಿಗ್ರಿ ಸೆಲ್ಶಿಯಸ್ ಕನಿಷ್ಟ ತಾಪಮಾನ ದಾಖಲಾಗುತ್ತಿದೆ. ಹಗಲಿನಲ್ಲಿ ಬಿಸಲು ಇಲ್ಲದಿರುವ ಹಾಗೂ ತಂಪಾದ ಮೇಲ್ಮೈ ಗಾಳಿ ಬೀಸುವುದರಿಂದ ಹೆಚ್ಚು ಚಳಿಯಾಗುತ್ತದೆ. ಸಂಕ್ರಾಂತಿ ಹಬ್ಬದವರೆಗೂ ಇದೇ ರೀತಿ ಚಳಿಯ ವಾತಾವರಣ ಹೆಚ್ಚಾಗಿ ಕಂಡುಬರಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

RELATED ARTICLES

Latest News