ರಾಜ್ಯದಲ್ಲಿ ಮುಂದುವರೆದ ವರುಣನ ಅಬ್ಬರ: ಮಲೆನಾಡು, ಉತ್ತರ ಕರ್ನಾಟಕಕ್ಕೆ ಮತ್ತೆ ಜಲ ಕಂಟಕ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.7-ರಾಜ್ಯದಲ್ಲಿ ವರುಣನ ಅಬ್ಬರ ಶುಕ್ರವಾರವೂ ಮುಂದುವರೆದಿದ್ದು, ಕರಾವಳಿ, ಮಲೆನಾಡು, ಮಧ್ಯ ಕಾರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜನಜೀವನ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದೆ. ಕಳೆದ ವರ್ಷದಂತೆ ಕರ್ನಾಟಕ್ಕಕೆ ಮತ್ತೆ ಜಲಕಂಠಕ ಎದುರಾಗುವ ಆಪಾಯದ ಮುನ್ಸೂಚನೆ ಸಿಕ್ಕಿದೆ.

ಬಹುತೇಕ ಕಡೆ ಕಾರ್ಯಾಚಾರಣೆಗೆ ವರುಣ ಅಡ್ಡಿಯಾಗಿದೆ.ಮಹಾಮಳೆಯಿಂದ ಧಾರವಾಡದ ಕಲಘಟಗಿ ತಾಲೂಕಿನಲ್ಲಿ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.ಅನೇಕ ಕಡೆ ಭಾರೀ ಮಳೆಯಾಗುತ್ತಿರುವ ಪರಿಣಾಮ , ರೈತರ ಬೆಳದ ಬೆಳೆಗಳು, ಮನೆಗಳು ಕೊಚ್ಚಿಹೋಗಿವೆ. ರಸ್ತೆಗಳು ಕುಸಿದು ಬಿದ್ದಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಕೆಲವು ಪ್ರದೇಶಗಳು ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡಿವೆ. ಜಿಲ್ಲಾಡಳಿತಕ್ಕೆ ಕಾರ್ಯಾಚಾರಣೆ ನಡೆಸಲು ಮಳೆ ಅಡ್ಡಿಯಾಗಿರುವುದರಿಂದ ಸಂತ್ರಸ್ಥರ ಪರಿಸ್ಥಿತಿ ಡೋಲಾಯಾನಮಾನವಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಡಿಕೇರಿ, ಹಾಸನ ,ಚಿಕ್ಕಮಗಳೂರು, ಶಿವಮೊಗ್ಗ, ಗದಗ, ಧಾರವಾಡ, ಬೆಳಗಾವಿ , ರಾಯಚೂರು ಸೇರಿದಂತೆ ಸುಮಾರು 12 ಕ್ಕೂ ಹೆಚ್ಚು ಜಿಲ್ಲೆಗಳು ಮಹಾಮಳೆಗೆ ಸಿಲುಕಿವೆ. ನದಿಗಳು,ಹಳ್ಳ, ಕೊಳ್ಳಗಳು ಆಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಹಾಮಳೆಗೆ ಈ ವರೆಗೂ ಒಟ್ಟು 10 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನರು ಮನೆ, ಮಠ, ಆಸ್ತಿಪಾಸ್ತಿ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ.

ತುಂಗಭದ್ರ, ಕಾವೇರಿ, ಭದ್ರಾ, ನೇತ್ರವತಿ, ಕುಮಾರಧಾರ,ಕೃಷ್ಣ ಸೇರಿದಂತೆ ಪ್ರಮುಖ ನದಿಗಳು ಆಪಾಯದ ಮಟ್ಟ ಮೀರಿ ಹರಿಯುತ್ತಿವೆ. ಭಾರೀ ಪ್ರಮಾಣದಲ್ಲಿ ನೀರು ಜಲಾಶಯಕ್ಕೆ ಹರಿದು ಬರುತ್ತಿರುವುದರಿಂಧ ನದಿ ಭಾಗದಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವುದು ಜಿಲ್ಲಾಡಳಿತಕ್ಕೆ ಸವಲಾಗಿ ಪರಿಣಮಸಿದೆ.
ಮಡಿಕೇರಿಯಲ್ಲಿ ಬ್ರಹ್ಮವರ ಬೆಟ್ಟ ಕುಸಿತು ಕಣ್ಮರೆಯಾಗಿರುವ ಅರ್ಚಕರ ಕುಟುಂಬ ಈ ವರೆಗೂ ಪತ್ತೆಯಾಗಿಲ್ಲ. ಶೋಧ ಕಾರ್ಯ ಮುಂದುವರೆದಿದ್ದು, ಬದುಕಿಳಿದಿರುವ ಸಾಧ್ಯತೆಗಳು ತೀರಾ ಕಡಿಮೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.ಕುಶಾಲನಗರ, ಸೋಮವಾರಪೇಟೆ, ವೀರಾಜ್ ಪೇಟೆ ಸೇರಿದಂತೆ ಅನೇಕ ಕಡೆ ಒಂದೇ ಸಮನೆ ಮಳೆ ಸುರಿಯುತ್ತಿರುವುದರಿಂದ ಜನ ಜೀವನ ಸಂಪೂಣರ್ಣವಾಗಿ ಅಸ್ತವ್ಯಸ್ತವಾಗಿದೆ.

ಕುಶಾಲನಗರದ ಕುವೆಂಪು ಬಡಾವಣೆಗೆ ನೀರು ನುಗ್ಗಿದ ಪರಿಣಾಮ ನೂರಾರು ಕುಟುಂಬಗಳು ರಾತ್ರಿ ಸುರಿಯುತ್ತಿದ್ದ ಮಳೆಯಲ್ಲೇ ಕಾಲ ಕಳೆಯುವಂತಾಯಿತು.ಮನೆ ಕುಸಿದು ಬಿದ್ದಿದ್ದರಿಂದ ಒಂದೇ ಕುಟುಂಬದ ನಾಲ್ವರು ಸಾವಿನಿಂದ ಪಾರಾದ ಘಟನೆಯೂ ಜರುಗಿದೆ.ಮಡಿಕೇರಿ ತಾಲೂಕಿನ ಬೊಟ್ಲಪ್ಪ ಗ್ರಾಮದಲ್ಲಿ ಭೂಕುಸಿತವಾಗಿದ್ದು, ಇದರಿಂದ ಮುನ್ನೆಚ್ಚರಿಕೆಯಾಗಿ ಸ್ಥಳೀಯ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಸ್ಥಳೀಯರಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಅಪಾಯದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯ ಮಾಡಲಾಗುತ್ತಿದೆ. ಆದರೆ ಸಂಪರ್ಕ ಕಡಿತಗೊಂಡ ಪರಿಣಾಮ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಭಾಗಮಂಡಲದ ಭಗಂಡೇಶ್ವರ ದೇವಸ್ಥಾನ ಜಲಾವೃತವಾಗಿದೆ. ಸತತವಾಗಿ ಎರಡನೇ ವರ್ಷವೂ ದೇವಲಯದ ಆವರಣಕ್ಕೆ ನೀರು ನುಗ್ಗಿದೆ. ಗುರುವಾರಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ನುಗ್ಗಿದೆ.ಇನ್ನೂ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಕುಶಾಲನಗರದ ಜನರು ಪ್ರವಾಹದ ಭೀತಿಯಲ್ಲಿದ್ದಾರೆ.

ಇದರಿಂದ ಸಾಯಿ ಬಡಾವಣೆ ಕುವೆಂಪುನಗರ ಮುಳುಗಡೆಯ ಭೀತಿಯಲ್ಲಿದೆ. ಅಲ್ಲದೇ ಮನೆಗಳಿಗೆ ನದಿಯ ನೀರು ನುಗ್ಗಿದ್ದು, ಭಾಗಶಃ ಮನೆಗಳು ಜಲಾವೃತವಾಗಿವೆ. ಇದರಿಂದ ಬಡಾವಣೆಯ ಜನರು ಸಂಕಷ್ಟದಲ್ಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಜಿಲ್ಲಾಡಳಿತ ಸ್ಥಳದಲ್ಲೇ ಬಿಡು ಬಿಟ್ಟಿದ್ದಾರೆ. ಬಹುತೇಕ ಕಡೆ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ಕಾರ್ಯಾಚಾರಣೆ ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪರಿಸ್ಥಿತಿ ಇನ್ನಷ್ಟು ಬಿಗಾಡಯಿಸುವ ಸಾಧ್ಯತೆ ಇದೆ.

ಮಲೆನಾಡಿನ ಜಿಲ್ಲೆಯಾದ ಚಿಕ್ಕಮಗಳೂರಿನಲ್ಲಿ ಇಂದು ಕೂಡ ಮಳೆಯ ಆರ್ಭಟ ಮುಂದುವರೆದಿದೆ. ಸುಮಾರು ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಕಾಫಿನಾಡಿನ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮಳೆಯಿಂದ ಗುಡ್ಡ ಕುಸಿದು, ಚಾರ್ಮಾಡಿಘಾಟ್ ಹಾಗೂ ಶೃಂಗೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯೂ ಬಂದ್ ಆಗಿದೆ.

ಮಣ್ಣು ತೆರೆವು ಕಾರ್ಯದಲ್ಲಿ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ನಿರತರಾಗಿದ್ದಾರೆ. ಎರಡು ಜೆಸಿಬಿ ಯಂತ್ರಗಳನ್ನು ಬಳಸಿ ತೆರವು ಕಾರ್ಯ ನಡೆಸಲಾಗುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಂಗಳೂರು ರಸ್ತೆ ಸಂಪರ್ಕ ಬಂದ್ ಆಗಿದ್ದು, ಶೃಂಗೇರಿಯ ಗಾಂಧಿ ಮೈದಾನ ಜಲಾವೃತವಾಗಿದೆ. ಕಪ್ಪೆ ಶಂಕರ ದೇವಾಲಯ ಕೂಡ ಮುಳುಗಡೆಯಾಗಿದೆ. ಹಾಗೇ, ಬಾಳೆಹೊನ್ನೂರು ಪಟ್ಟಣದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾ ನದಿಯಿಂದ ಬಾಳೆಹೊನ್ನೂರಿನ ಸಂತೆ ಮೈದಾನದ ಕಟ್ಟಡಗಳು, ಮಳಿಗೆಗಳು ಜಲಾವೃತವಾಗಿವೆ. ಇದರಿಂದ ಬಾಳೆಹೊನ್ನೂರು-ಕಳಸ ಸಂಪರ್ಕ ಕಡಿತಗೊಂಡಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ಭಾಗದಲ್ಲೂ ಮಳೆ ಮುಂದುವರೆದಿದೆ. ಇದರಿಂದ ಮಲೆನಾಡಿನ ಜನಜೀವನದ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವು ಮನೆಗಳು ,ಸೇತುವೆಗಳು ಹಾನಿಗೊಳಗಾಗಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಬೆಳ್ತಂಗಡಿ ತಾಲೂಕಿನ ಹಲವು ಪ್ರದೇಶಗಳಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು ಚಾರ್ಮಾಡಿ ಘಾಟ್ ನಲ್ಲಿ ಭೂ ಕುಸಿತ ಉಂಟಾಗಿದೆ, ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಸ್ನಾನಘಟ್ಟ ಕೂಡ ಮುಳುಗಿದ್ದು ಭಕ್ತಾದಿಕಗಳಿಗೆ ಸ್ನಾನಕ್ಕೆ ಅವಕಾಶ ನೀಡುತ್ತಿಲ್ಲ.

ಶಿವಮೊಗ್ಗದಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ, ಜಿಲ್ಲೆಯಲ್ಲಿ ಅನೇಕ ಕಡೆ ಪ್ರವಾಹ ಭೀತಿ ಉಂಟಾಗಿದೆ. ಜಿಲ್ಲೆಯ ತೀರ್ಥಹಳ್ಳಿ, ಶಿವಮೊಗ್ಗ. ಸಾಗರ, ಶಿಕಾರಿಪುರ ಸೇರಿದಂತೆ ಮತ್ತಿತರ ಕಡೆ ರೈತರ ಬೆಳೆಗಳು ಕೊಚ್ಚಿ ಹೋಗಿದ್ದು, ಕೆಲವು ಕಡೆ ಮನೆಗಳು ಕುಸಿದು ಬಿದ್ದಿವೆ.ಹಳ್ಳ,ಕೊಳ್ಳಗಳು, ಕರೆಗಳು, ನದಿಗಳು ಭರ್ತಿಯಾಗಿವೆ. ತುಂಗಭದ್ರ ನದಿ ಆಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ತೀರದ ಜನರನ್ನು ಬಲವಂತಾಗಿ ಜಿಲ್ಲಾಡಳಿತ ಸ್ಥಳಾಂತರ ಮಾಡಿದೆ. ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕರು ಹಾಗೂ ಅಧಿಕಾರ ವರ್ಗ ಸ್ಥಳದಲ್ಲೇ ಮೊಕ್ಕಂ ಹೂಡಿದ್ದಾರೆ.

ತುಂಗಭದ್ರ ನದಿ ಭರ್ತಿಯಾಗಿರುವ ಕಾರಣ, ಪಕ್ಕದ ಹೊನ್ನಾಳಿಯಲ್ಲೂ ನೆರೆ ಉಂಟಾಗಿದೆ.ನದಿ ಉಕ್ಕಿ ಹರಿಯುತ್ತಿದ್ದು, ಯಾವುದೇ ಕ್ಷಣದಲ್ಲೂ ಪ್ರವಾಹ ಉಂಟಾಗುವ ಆಪಾಯ ಎದುರಾಗಿದೆ. ಹೀಗಾಗಿ ಕೆಲವು ಕಡೆ ಜನರನ್ನು ತಕ್ಷಣವೇ ಮನೆ ಖಾಲಿ ಮಾಡಿವಂತೆ ಸೂಚಿಸಿದೆ.ಹರಿಹರದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂತ್ರಸ್ಥರನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಹರಸಾಹಸ ನಡೆಸಿದೆ.

ಮಹಾರಾಷ್ಟ್ರದಲ್ಲಿ ಉಂಟಾಗಿರುವ ನೆರೆಹಾವಳಿಯಿಂದ ಉತ್ತರ ಕರ್ನಾಟಕದ ಗದಗ, ಧಾರವಾಡ, ಬೆಳಗಾವಿ ಮತ್ತಿತರ ಭಾಗಗಳಲ್ಲಿ ವರುಣನ ಅರ್ಭಟ ಮುಂದುವರೆದಿದೆ. ಬಾಗಲಕೋಟೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ವೇದಗಂಗಾ, ದೂದ್‍ಗಂಗಾ, ಘಟಪ್ರಭ, ಮಲಪ್ರಭಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಲವು ಸೇತುವೆಗಳು ಮುಳುಗಡೆಯಾಗಿವೆ.

ಬೆಳಗಾವಿ ಜಿಲ್ಲೆ ಕಾಗವಾಡ, ರಾಯಭಾಗ, ಅಥಣಿ ತಾಲ್ಲೂಕಿನ ನದಿತೀರದ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಳೆದ ವರ್ಷದ ಪ್ರವಾಹದ ಭಯವೇ ಇನ್ನು ಈ ಭಾಗದ ಜನರಲ್ಲಿ ಮಾಸಿಲ್ಲ. ಈಗ ಮತ್ತೆ ಪ್

Facebook Comments