ಕೆಎಎಸ್ ಅಧಿಕಾರಿಗಳ ಮರು ನಿಯುಕ್ತಗೊಳಿಸಿ ಸರ್ಕಾರ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

Vidhanasoudha--01

ಬೆಂಗಳೂರು, ಜೂ.7- ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ವರ್ಗಾವಣೆ ಮಾಡಲಾಗಿದ್ದ ಹಿರಿಯ ಹಾಗೂ ಕಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಗಳನ್ನು ಸರ್ಕಾರ ಮತ್ತೆ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಹುದ್ದೆಗಳಿಗೆ ಮರು ಸ್ಥಳ ನಿಯುಕ್ತಗೊಳಿಸಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿರುವುದರಿಂದ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.ಕೆಎಎಸ್‍ನ ಹಿರಿಯ ಹಾಗೂ ಕಿರಿಯ ಶ್ರೇಣಿಯ ಒಟ್ಟು 96 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಆಯುಕ್ತರಾಗಿ ಶಕಿಲ್ ಅಹಮ್ಮದ್, ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾಗಿ ಮಂಜುನಾಥ್ ಬಳ್ಳಾರಿ , ಕೃಷ್ಣ ಭಾಗ್ಯ ಜಲ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿ ದೇವರಾಜ್ ಯಾದವ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಶ್ರೀಕಾಂತ್ ರಾವ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

Facebook Comments

Sri Raghav

Admin