ಮಾರುಕಟ್ಟೆ ಪ್ರದೇಶದ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ :18 ಮಂದಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Graned-Attack
ಶ್ರೀನಗರ, ಜೂ. 4-ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಶೋಪಿಯಾನ್ ಜಿಲ್ಲೆಯ ಜನ ದಟ್ಟಣೆ ಮಾರುಕಟ್ಟೆ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಪೊಲೀಸರೂ ಸೇರಿದಂತೆ 18 ಮಂದಿ ತೀವ್ರ ಗಾಯಗೊಂಡಿದ್ದಾರೆ. ಜ ಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಪಟ್ಟಣದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೆನೇಡ್ ಎಸೆದರು. ಈ ಘಟನೆಯಲ್ಲಿ ನಾಲ್ವರು ಪೊಲೀಸರು ಹಾಗೂ 14 ನಾಗರಿಕು ಗಾಯಗೊಂಡರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ದಾಳಿ ನಂತರ ಪರಾರಿಯಾಗಿರುವ ಭಯೋತ್ಪಾದಕರಿಗಾಗಿ ತೀವ್ರ ಶೋಧ ಮುಂದುವರಿದಿದೆ.

Facebook Comments

Sri Raghav

Admin