ಗಡಿಯಲ್ಲಿ ಮತ್ತೆ ಪಾಕ್ ಪುಂಡಾಟ : ಗ್ರಾಮಸ್ಥರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ಜಮ್ಮು, ಮೇ 26-ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪಾಕಿಸ್ತಾನಿ ಸೇನೆ ಮತ್ತೆ ಬಾಲ ಬಿಚ್ಚಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್‍ಓಸಿ) ಬಳಿ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಈ ಉದ್ದಟತನದ ಕೃತ್ಯದಲ್ಲಿ ಕೆಲ ಗ್ರಾಮಸ್ಥರಿಗೆ ಗಾಯಗಳಾಗಿವೆ.

ನಿನ್ನೆ ಮಧ್ಯರಾತ್ರಿಯಿಂದ ನೌಶೇರಾ ವಲಯದ ಎಲ್‍ಒಸಿ ಬಳಿ ಸೇನಾ ನೆಲೆಗಳು ಮತ್ತು ಗ್ರಾಮಗಳನ್ನು ಗುರಿಯಾಗಿಟ್ಟುಕೊಂಡು ಪಾಕ್ ರೇಂಜರ್‍ಗಳು ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದಾರೆ. ಈ ಅಪ್ರೇರಿತ ದಾಳಿಯಲ್ಲಿ ಬಾಲಕ ಸೇರಿದಂತೆ ಕೆಲವರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೋಖ್ರಾನಿ ಗ್ರಾಮದ ತನ್ನ ಮನೆಯಲ್ಲಿ ನಿದ್ರಿಸುತ್ತಿದ್ದ ಮಹಮದ್ ಇಶಾಖ್ ಎಂಬ ಬಾಲಕನಿಗೆ ಗುಂಡೇಟಿನಿಂದ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.

ಪಾಕಿಸ್ತಾನದ ಈ ದಾಳಿಗೆ ಭಾರತೀಯ ಸೇನಾಪಡೆ ಯೋಧರೂ ಪ್ರತಿ ದಾಳಿ ನಡೆದ ದಿಟ್ಟ ಉತ್ತರ ನೀಡಿದ್ದಾರೆ. ಎರಡೂ ಕಡೆಯಿಂದ ಕೆಲವು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆಯಿತು ಎಂದು ಹಿರಿಯ ಸೇನಾಧಿಕಾರಿಯೊಬ್ಬರು ಹೇಳಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ