ರಾಜ್ಯಸಭೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ನಾಮಪತ್ರ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.29- ಡಿಸೆಂಬರ್ 12ರಂದು ನಡೆಯಲಿರುವ ರಾಜ್ಯಸಭೆಯ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿವೃತ್ತ ಪೆÇಲೀಸ್ ಅಧಿಕಾರಿ ಕೆ.ಸಿ.ರಾಮಮೂರ್ತಿ ಇಂದು ನಾಮಪತ್ರ ಸಲ್ಲಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ರಾಜ್ಯ ಸಚಿವ ಆರ್.ಅಶೋಕ್, ಸಂಸದರಾದ ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ರಾಜ್ಯಸಭಾ ಸದಸ್ಯರಾದ ರಾಜೀವ್ ಚಂದ್ರಶೇಖರ್, ಪ್ರಭಾಕರ್ ಕೋರೆ ಸೇರಿದಂತೆ ಮತ್ತಿತರ ನೇತೃತ್ವದಲ್ಲಿ ರಾಮಮೂರ್ತಿಯವರು ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು.

ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಡಿ.5 ಕಡೆಯ ದಿನವಾಗಿದ್ದು, 12ರಂದು ಅಗತ್ಯವಿದ್ದರೆ ಮತದಾನ ನಡೆಯಲಿದೆ. ಈಗಿರುವ ವಿಧಾನಸಭೆಯ ಬಲಾಬಲದಲ್ಲಿ ರಾಮಮೂರ್ತಿ ರಾಜ್ಯಸಭೆಗೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್‍ನವರ ಬಳಿ ಗೆಲ್ಲಲು ಬೇಕಾದ ಸಂಖ್ಯಾಬಲ ಇಲ್ಲದ ಕಾರಣ ತಟಸ್ಥರಾಗಿ ಉಳಿಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.  ಒಂದು ವೇಳೆ ಎರಡೂ ಪಕ್ಷಗಳು ತಟಸ್ಥರಾಗಿ ಉಳಿದರೆ ರಾಮಮೂರ್ತಿ ಅವಿರೋಧವಾಗಿ ಆಯ್ಕೆಯಾಗುವುದು ಖಚಿತ.

ಈ ಹಿಂದೆ ಕಾಂಗ್ರೆಸ್‍ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು ಅನಿವಾರ್ಯ ಕಾರಣಗಳಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಇತ್ತೀಚೆಗಷ್ಟೇ ಅವರಿಗೆ ಪಕ್ಷವು ಟಿಕೆಟ್ ಘೋಷಣೆ ಮಾಡಿತ್ತು.

Facebook Comments