ಸೆ.10ಕ್ಕೆ ಕೆಂಪೇಗೌಡ ದಿನಾಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.3- ಮುಂದೂಡಿಕೆಯಾಗಿದ್ದ ಕೆಂಪೇಗೌಡ ದಿನಾಚರಣೆಯನ್ನು ಇದೇ ಸೆ.10ಕ್ಕೆ ನಡೆಸಲು ತೀರ್ಮಾನಿಸಲಾಗಿದೆ. ಸೆ.2ರಂದು ನಿಗದಿಯಾಗಿದ್ದ ಕೆಂಪೇಗೌಡ ದಿನಾಚರಣೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನದ ಹಿನ್ನೆಲೆಯಲ್ಲಿ ಶೋಕಾಚರಣೆ ಘೋಷಿಸಿದ್ದರಿಂದ ಮುಂದೂಡಿಕೆಯಾಗಿತ್ತು.

ಸೆ.10ರಂದು ಬಿಬಿಎಂಪಿ ಆಡಳಿತ ಕೊನೆಗೊಳ್ಳುವ ದಿನ. ಅಂದೇ ಕೆಂಪೇಗೌಡ ದಿನಾಚರಣೆ ಮಾಡಲು ತೀರ್ಮಾನಿಸಲಾಗಿದ್ದು, ಅಂದು 25 ಕೊರೊನಾ ವಾರಿಯರ್ಸ್‍ಗಳಿಗೆ ಕೆಂಪೇಗೌಡ ಪ್ರಶಸ್ತಿ ವಿತರಣೆ ಮಾಡಲಾಗುವುದು.

ಕೆಂಪೇಗೌಡ ದಿನಾಚರಣೆ ಈಗಾಗಲೇ ಎರಡು ಬಾರಿ ಮುಂದೂಡಿಕೆಯಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಒಂದು ಬಾರಿ ಮುಂದೂಡಿಕೆಯಾಗಿತ್ತು. ಮಾಜಿ ರಾಷ್ಟ್ರಪತಿ ನಿಧನದ ಹಿನ್ನೆಲೆಯಲ್ಲಿ ಮತ್ತೊಂದು ಬಾರಿ ಮುಂದೂಡಿಕೆಯಾಗಿತ್ತು. ಈಗ ಸೆ.10ಕ್ಕೆ ಕೆಂಪೇಗೌಡ ದಿನಾಚರಣೆ ಆಚರಿಸಲು ದಿನಾಂಕ ನಿಗದಿಯಾಗಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.

Facebook Comments