ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಆರೋಗ್ಯ ತಪಾಸಣೆ ಕಡ್ಡಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಗ್ರಾ.ಜಿಲ್ಲೆ, ಮಾ.19- ವಿದೇಶಗಳಿಂದ ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಆರೋಗ್ಯ ತಪಾಸಣೆಯನ್ನು ಕಡ್ಡಾಯವಾಗಿ ನಡೆಸಲಾಗುವುದು ಎಂದು ಬೆಂಗಳೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಜಗದೀಶ್. ಕೆ.ನಾಯಕ್ ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರಿಗೆ Quarantine Facilities ಒದಗಿಸುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕರೆಯಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇವನಹಳ್ಳಿ ತಾಲ್ಲೂಕಿನ ಪ್ರಸನ್ನಹಳ್ಳಿಯ ಆಕಾಶ್ ಮೆಡಿಕಲ್ ಕಾಲೇಜಿನಲ್ಲಿ ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರಿಗೆ ಕರೋನಾ ವೈರಸ್ ಕುರಿತ ಆರೋಗ್ಯ ತಪಾಸಣಾ(Quarantine Facilities ) ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರಲ್ಲಿ ಕರೋನಾ ವೈರಸ್ ಕುರಿತ ಆರೋಗ್ಯ ತಪಾಸಣೆಯಲ್ಲಿ ಈಗಾಗಲೇ ಎ.ಬಿ.ಸಿ ಎಂದು 3 ಗುಂಪುಗಳನ್ನು ಮಾಡಿಕೊಳ್ಳಲಾಗಿದ್ದು, ನೆಗಡಿ, ಕೆಮ್ಮು, ಜ್ವರದ ಲಕ್ಷಣ ಹೊಂದಿರುವವರನ್ನು ಎ ಗುಂಪು, 60 ವರ್ಷ ಮೇಲ್ಪಟ್ಟಿರುವ ಮಧುಮೇಹ, ರಕ್ತದೊತ್ತಡ, ಅಸ್ತಮಾ ಸೇರಿದಂತೆ ಇನ್ನಿತರೆ ಕಾಯಿಲೆಯಿಂದ ಬಳುತ್ತಿರುವವ ಪ್ರಯಾಣಿಕರನ್ನು ಬಿ ಗುಂಪು ಹಾಗೂ 60 ವರ್ಷದ ಕಡಿಮೆ ವಯಸ್ಸಿನವರಲ್ಲಿ ಕರೋನ ರೋಗದ ಸೋಂಕಿನ ಲಕ್ಷಣಗಳಿರುವ ಪ್ರಯಾಣಿಕರನ್ನು ಸಿ ಗುಂಪೆಂದು ವಿಂಗಡಿಸಲಾಗಿದ್ದು, ಕರೋನಾ ಸೋಂಕಿತ ಶಂಕಿತ ಪ್ರಯಾಣಿಕರನ್ನು 14 ದಿನಗಳ ಕಾಲ ವೈದ್ಯರ ಮೇಲ್ವಿಚಾರಣೆಯಲ್ಲಿ ತೀವ್ರ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಮಂಜುನಾಥ್, ಜಂಟಿ ಕಾರ್ಮಿಕ ಆಯುಕ್ತ ರವಿಕುಮಾರ್.ಬಿ.ಎಸ್, ಸಹಾಯಕ ಕಾರ್ಮಿಕ ಆಯುಕ್ತ ದೇವರಾಜ್, ಅಬಕಾರಿ ಉಪ ಆಯುಕ್ತ ರವೀಂದ್ರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಪದ್ಮಾನಾಭ್, ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ನಾಗರಾಜ್ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Facebook Comments

Sri Raghav

Admin