ಚಿನ್ನ ಕಳ್ಳಸಾಗಣೆ ಮೂಲಕ ಭಯೋತ್ಪಾದಕರಿಗೆ ಹಣಕಾಸು ನೆರವು..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜು.11- ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಸಾಗಣೆಯಾಗುತ್ತಿದ್ದ ಚಿನ್ನ ಪತ್ತೆಹಚ್ಚಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಇದನ್ನು ಭಯೋತ್ಪಾದಕರಿಗೆ ಹಣಕಾಸು ಒದಗಿಸುವ ಹೊಸಮಾರ್ಗ ಎಂದು ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಹೇಳಿದೆ.

ಕರಾವಳಿ ಭಾಗದ ವಿಮಾನ ನಿಲ್ದಾಣಗಳಲ್ಲಿ ಇತ್ತೀಚೆಗೆ ಚಿನ್ನ ಕಳ್ಳ ಸಾಗಾಣಿಕೆ ಹೆಚ್ಚಾಗಿದ್ದು, ಇದರ ಹಿಂದಿನ ಜಾಲವನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಕೇಂದ್ರೀಯ ತನಿಖಾ ದಳ ಹೊಸ ಮಾಹಿತಿಯನ್ನು ಹೊರಹಾಕಿರುವುದು ಎಲ್ಲರನ್ನೂ ಚಕಿತಗೊಳಿಸಿದೆ.

ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಜಾಲ ಹರಡಿಕೊಂಡಿದ್ದು, ಭಯೋತ್ಪಾದಕರಿಗೆ ಹಣಕಾಸು ಒದಗಿಸುವ ಹಲವು ಮಾರ್ಗಗಳಲ್ಲಿ ಚಿನ್ನ ಕಳ್ಳ ಸಾಗಣೆಯೂ ಒಂದು ಎಂದು ತಿಳಿಸಿದ್ದಾರೆ.

ಕಳೆದ ದಿನಗಳಲ್ಲಿ ಭಾರತಕ್ಕೆ ಅತಿ ಹೆಚ್ಚು ಚಿನ್ನವನ್ನು ಕಳ್ಳಸಾಗಾಣಿಕೆ ಮೂಲಕ ಸಾಗಿಸುತ್ತಿರುವ ಮಾಹಿತಿ ಸಿಕ್ಕಿದ್ದು ಕೆಲವು ಮಾಹಿತಿಗಳು ಪತ್ತೆಯಾಗಿವೆ.

ಇನ್ನೂ ಕೆಲವು ಕಳ್ಳಮಾರ್ಗದ ಮೂಲಕ ಸಾಗಣೆಯಾಗಿವೆ.  ಇದು ನಮ್ಮ ದೇಶದ ಆರ್ಥಿಕತೆಯನ್ನು ಹಾಳು ಮಾಡಲು ಮತ್ತು ಭಯೋತ್ಪಾದಕ ಕೃತ್ಯಗಳಿಗೆ ಬಳಸಿಕೊಳ್ಳುವುದು ದಟ್ಟವಾಗಿದೆ ಎಂದು ಹೇಳಿದ್ದಾರೆ.

ಕೇರಳ ಹೈಕೋರ್ಟ್‍ನಲ್ಲಿ ನಡೆಯುತ್ತಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಎನ್‍ಐಎ ಕೆಲವೊಂದು ಆತಂಕಕಾರಿ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

Facebook Comments

Sri Raghav

Admin