ಕೇರಳದಲ್ಲಿ ಕೊರೋನಾ ಕಂಟ್ರೋಲ್‌ಗೆ ಸ್ಟ್ರಿಕ್ಟ್ ರೂಲ್ಸ್ ಜಾರಿ..!

ಈ ಸುದ್ದಿಯನ್ನು ಶೇರ್ ಮಾಡಿ

ಕಾಸರಗೋಡು: ಕೇರಳ ಸರಕಾರ ಕೊರೋನಾ ವಿರುದ್ದ ಹೋರಾಟದಲ್ಲಿ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ತಂದಿದ್ದು, ಇದೀಗ ರಾಜ್ಯದಲ್ಲಿ ಕೊರೊನಾ ಪ್ರಕರಗಳ ಹೆಚ್ಚಾಗುತ್ತಿರುವ ಹಿನ್ನಲೆ ಕೇರಳ ಸರಕಾರ ಸಾರ್ವಜನಿಕ ಮತ್ತು ಕೆಲಸದ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದು, ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ 10,000 ರೂ.ವರೆಗೆ ದಂಡ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಸುಗ್ರೀವಾಜ್ಞೆ ಹೊರಡಿಸಿದೆ.

ಕೊರೋನಾ ರೋಗದ ವಿರುದ್ಧ ಹೋರಾಡಲು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಈ ಸುಗ್ರೀವಾಜ್ಞೆಯನ್ನು ಹೊರಡಿಸಲಾಗಿದೆ ಎಂದು ತಿಳಿಸಿದೆ.

ಹೊಸ ಆದೇಶದಲ್ಲಿ, ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು, ವಾಹನಗಳು ಮತ್ತು ಜನರು ಸೇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಸಾರ್ವಜನಿಕ ಸ್ಥಳಗಳು ಹಾಗೂ ಕಾರ್ಯಕ್ರಮಗಳಲ್ಲಿ ಆರು ಅಡಿಗಳ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಎಲ್ಲಾ ಸಮಯದಲ್ಲೂ ಪಾಲಿಸಬೇಕು.

ಅಂಗಡಿಗಳು ಮತ್ತು ಇತರ ವ್ಯಾಪಾರ ಸಂಸ್ಥೆಗಳಲ್ಲಿ 25 ಕ್ಕೂ ಹೆಚ್ಚು ಜನರು ಇರಬಾರದು. ಮಾಲೀಕರು ಅಂಗಡಿಗೆ ಪ್ರವೇಶಿಸುವ ಮೊದಲು ಗ್ರಾಹಕರಿಗೆ ಸ್ಯಾನಿಟೈಸರ್‌ ಬಳಸಲು ಹೇಳಬೇಕು.

ವಿವಾಹ ಸಮಾರಂಭದಲ್ಲಿ ಗರಿಷ್ಠ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಪ್ರತಿಯೊಬ್ಬರು ಮಾಸ್ಕ್‌ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಪಾಲಿಸಬೇಕು. ಅಂತ್ಯಸಂಸ್ಕಾರದಲ್ಲಿ ಏಕಕಾಲದಲ್ಲಿ 20 ಮಂದಿ ಮಾತ್ರ ಪಾಲ್ಗೊಳ್ಳಬಹುದು.

ಮುಷ್ಕರಗಳು, ಧರಣಿಗಳು, ಮೆರವಣಿಗೆಗಳು ಮತ್ತು ಪ್ರತಿಭಟನೆಗಳಿಗೆ ರಾಜ್ಯ ಸರ್ಕಾರದಿಂದ ಅನುಮತಿ ಪಡೆಯಬೇಕು ಹಾಗೂ 10 ಮಂದಿ ಮಾತ್ರ ಭಾಗವಹಿಸಬಹುದು.

Facebook Comments

Sri Raghav

Admin