ಬೆಂಗಳೂರು ಉತ್ತರ ವಿಭಾಗಕ್ಕೆ ಕೇರಳದ ಪೊಲೀಸ್ ಪಡೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.27- ಚುನಾವಣಾ ಬಂದೋಬಸ್ತ್‍ಗಾಗಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉತ್ತರ ವಿಭಾಗಕ್ಕೆ ಕೇರಳದ ಪೊಲೀಸ್ ಪಡೆ ಆಗಮಿಸಿದೆ.  ನಿನ್ನೆ ನಗರಕ್ಕೆ ಆಗಮಿಸಿರುವ ಕೇರಳ ರಾಜ್ಯದ ಸಶಸ್ತ್ರ ಮೀಸಲು ಪಡೆ(ಕೆಎಸ್‍ಎಪಿ) ಇಂದು ಉತ್ತರ ವಿಭಾಗದ ಜಾಲಹಳ್ಳಿ, ಆರ್‍ಎಂಸಿಯಾರ್ಡ್ ಮುಂತಾದ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಪಥಸಂಚಲನ ನಡೆಸಲಿದೆ.

ಈಗಾಗಲೇ ಈ ವಿಭಾಗಕ್ಕೆ ಸಿಐಎಸ್‍ಎಫ್ ಒಂದು ಕಂಪನಿ ಬಂದಿದ್ದು, ಅದನ್ನು ಚುನಾವಣಾ ಬಂದೋಬಸ್ತ್‍ಗೆ ನಿಯೋಜಿಸಲಾಗಿದೆ.  ಉತ್ತರ ವಿಭಾಗದ 8 ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮತದಾನ ನಡೆಯಲಿದೆ. ಸ್ಥಳೀಯ ಪೊಲೀಸರ ಜೊತೆಗೆ ಹೆಚ್ಚುವರಿಯಾಗಿ 10 ಮಂದಿ ಪೆÇಲೀಸ್ ಇನ್‍ಸ್ಪೆಕ್ಟರ್‍ಗಳು, 36 ಸಬ್‍ಇನ್‍ಸ್ಪೆಕ್ಟರ್‍ಗಳು, 200 ಮಂದಿ ಕಾನ್‍ಸ್ಟೆಬಲ್ ಮತ್ತು ಹೆಡ್‍ಕಾನ್‍ಸ್ಟೆಬಲ್‍ಗಳು, 4 ಕೆಎಸ್‍ಆರ್‍ಪಿ ಮತ್ತು 3 ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.

ಮುಕ್ತ ಹಾಗೂ ಶಾಂತಿಯುತ ಮತದಾನಕ್ಕಾಗಿ ಪೊಲೀಸ್ ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ.

Facebook Comments