ಕೇರಳದಲ್ಲಿ ಮತ್ತೆ ಜಲಪ್ರಳಯದ ಆತಂಕ, ರೆಡ್ ಅಲರ್ಟ್ ಘೋಷಣೆ..!

ಈ ಸುದ್ದಿಯನ್ನು ಶೇರ್ ಮಾಡಿ

ತಿರುವನಂತಪುರಂ, ಆ.8- ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಕೇರಳ ವಿಪತ್ತು ನಿರ್ವಹಣಾ ದಳ ಮುಂದಿನ 24 ಗಂಟೆಗಳ ಕಾಲ ಇಡುಕಿ, ಮಲಪ್ಪುರಂ ಮತ್ತು ಕಲ್ಲಿಕೋಟೆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಕೇರಳದಾದ್ಯಂತ ಭಾರೀ ವರ್ಷಧಾರೆಯಾಗುತ್ತಿದ್ದು, ಇನಷ್ಟು ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ರಾಜ್ಯದ ಹಲವು ಪ್ರದೇಶಗಳಿಗೆ ಕಟ್ಟೆಚ್ಚರ ಘೋಷಣೆ ಮಾಡಿ, ಸ್ಥಳೀಯರು ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ.

ತ್ರಿಶೂರ್, ಪಲಕ್ಕಡ್, ವಯನಾಡು ಕಣ್ಣೂರು, ಕಾಸರಗೋಡು ಸೇರಿದಂತೆ ಹಲವು ಪ್ರದೇಶಗಳಿಗೆ ನಿನ್ನೆ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಮಲ್ಲಾ ಮಲಪ್ಪುರಂ ಹಾಗೂ ವಯನಾಡಿನಲ್ಲಿ ಭಾರೀ ಮಳೆಯಿಂದಾಗಿ ಕರೆಕಟ್ಟೆಗಳು, ಜಲಾಶಯಗಳು ತುಂಬಿ ಅಪಾಯದ ಮಟ್ಟ ಮೀರಿದ್ದರಿಂದ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಮಳೆ ಆರ್ಭಟ ಮುಂದುವದಿರುವುದರಿಂದ ಇಂದು ಕೂಡ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆಯೂ ಇಡುಕಿ ಮತ್ತು ಕಲ್ಲಿಕೋಟೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿ ಎಚ್ಚರಿಕೆಯಿಂದಿರುವಂತೆ ಸ್ಥಳೀಯರಿಗೆ ಸೂಚನೆ ನೀಡಲಾಗಿದೆ. ಇನ್ನು ಮೂರು ದಿನಗಳಕಾಲ ಕೇರಳದಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇತರ ರಾಜ್ಯಗಳಲ್ಲೂ ವರುಣನ ಕಾಟ:
ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾದ ಪ್ರದೇಶಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದ್ದು, ಇಲ್ಲೂ ಕೂಡ ಕಟ್ಟೆಚ್ಚರ ವಹಿಸಲು ಸೂಚಿಸಿದೆ.  ಪಶ್ಚಿಮ ಮಧ್ಯಪ್ರದೇಶ, ಪೂರ್ವ ರಾಜಸ್ಥಾನ, ಮಧ್ಯ ಮಹಾರಾಷ್ಟ್ರ, ಕೇರಳ, ಮಹೇ ಮತ್ತು ದಕ್ಷಿಣ ಆಂತರಿಕ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಭಾರಿ ಮಳೆಯೊಂದಿಗೆ ಭಾರೀ ಮಳೆಯಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಉತ್ತರಾಖಂಡ, ಲಕ್ಷದ್ವೀಪ, ತೆಲಂಗಾಣ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಒಡಿಶಾದ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ ಎಂದು ಐಎಂಡಿ ತಿಳಿಸಿದೆ.

40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಉತ್ತರ, ಮಧ್ಯ ಮತ್ತು ನೈರುತ್ಯ ಅರೇಬಿಯನ್ ಸಮುದ್ರ, ಮಧ್ಯ ಮತ್ತು ದಕ್ಷಿಣ ಬಂಗಾಳಕೊಲ್ಲಿ ಮತ್ತು ಪಶ್ಚಿಮ ಕರಾವಳಿ ಮತ್ತು ಪಶ್ಚಿಮ ಬಂಗಾಳ-ಒಡಿಶಾ-ಆಂಧ್ರ ಕರಾವಳಿ ಮತ್ತು ಅಂಡಮಾನ್ ಸಮುದ್ರಗಳಲ್ಲಿ ಭಾರೀ ಅಲೆಗಳು ಏರುವ ಸಾಧ್ಯತೆಯಿದೆ. ಮುಂದಿನ ಕೆಲವು ದಿನಗಳವರೆಗೆ ಈ ಪ್ರದೇಶಗಳಿಗೆ ಕಾಲಿಡದಂತೆ ಮೀನುಗಾರರಿಗೆ ಐಎಂಡಿ ಎಚ್ಚರಿಕೆ ನೀಡಿದೆ.

Facebook Comments