ಫೋಟೋ ಜರ್ನಲಿಸ್ಟ್ ಕೇಶವ ವಿಟ್ಲ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

Keshva-Vitla--01

ಮಂಗಳೂರು, ಮೇ 28-ಖ್ಯಾತ ಪತ್ರಿಕಾ ಛಾಯಾಗ್ರಾಹಕ ಕೇಶವ ವಿಟ್ಲ(56) ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  1984ರಲ್ಲಿ ಮುಂಗಾರು ಪತ್ರಿಕೆ ಮೂಲಕ ತಮ್ಮ ಪತ್ರಿಕಾ ಛಾಯಾಗ್ರಾಹಕ ವೃತ್ತಿ ಆರಂಭಿಸಿದ್ದ ಅವರು, 1996ರಲ್ಲಿ ಬೆಂಗಳೂರಿನ ಇಂಡಿಯನ್ ಎಕ್ಸ್‍ಪ್ರೆಸ್ ಗ್ರೂಪ್‍ಗೆ ಸೇರಿ ಕೆಲವು ವರ್ಷಗಳ ಕಾಲ ಫೋಟೊ ಜರ್ನಲಿಸ್ಟ್ ಆಗಿ ಕಾರ್ಯನಿರ್ವಹಿಸಿದರು. ನಂತರ ವಿಟ್ಲ ಹವ್ಯಾಸಿ ಛಾಯಾಗ್ರಾಹಕರಾಗಿ ಟೆಲಿಗ್ರಾಫ್, ಹಿಂದೂಸ್ತಾನ್ ಟ್ರೈಮ್ಸ್ ಮೊದಲಾದ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು.

ಹಲವಾರು ಪ್ರಶಸ್ತಿ-ಪುರಸ್ಕಾರಗಳಿಗೆ ಭಾಜನರಾಗಿದ್ದ ಅವರು, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹೊರತಂದಿರುವ ಫ್ಯಾಕ್ಟ್ ಆಫ್ ಕರ್ನಾಟಕ-ಎ ಪಿಕ್ಟೋರಿಯಲ್ ಜರ್ನಿ ಎಂಬ ದೃಶ್ಯ ಕೃತಿ ಮೂಲಕ ರಾಜ್ಯದ ಪ್ರವಾಸಿ ತಾಣಗಳು ಮತ್ತು ನಿಸರ್ಗ ಸೊಬಗನ್ನು ತಮ್ಮ ಕ್ಯಾಮೆರಾ ಕಣ್ಣಿನಲ್ಲಿ ಅದ್ಭುತವಾಗಿ ಸೆರೆ ಹಿಡಿದಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin