ಕೆಜಿಎಫ್ ಚಿತ್ರದಲ್ಲಿ ನಟಿಸಿದ್ದ ನಟ ಮೋಹನ್ ಜುನೇಜ ಇನ್ನಿಲ್ಲ..!

ಈ ಸುದ್ದಿಯನ್ನು ಶೇರ್ ಮಾಡಿ

ಕೆಲವು ದಿನಗಳಿಂದ ಅನಾರೋಗ್ಯ ನಿಂದ ಬಳಲುತ್ತಿದ್ದ ಅವರನ್ನು ಚಿಕ್ಕಬಾಣಾವರ ಸಪ್ತಗಿರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರೆಳೆದಿದ್ದಾರೆ. ನವಗ್ರಹ, ಜೋಗಿ, ಕೆಜಿಎಫ್ ಸಿನಿಮಾಗಳು ಸೇರಿದಂತೆ 100 ಕ್ಕು ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅಷ್ಟೇ ಅಲ್ಲದೆ ಕಿರುತೆರೆಯಲ್ಲಿ ಸುಮಾರು ಧಾರವಾಹಿಗಳಲ್ಲಿ ನಟಿಸುವ ಮೂಲಕ ಪ್ರೇಕ್ಷಕರ ಮನಗೆದ್ದಿದ್ದರು.

ಚೆಲ್ಲಾಟ ಚಿತ್ರದ ಮಧುಮಗ ಪಾತ್ರ ಮೋಹನ್ ಅವರಿಗೆ ಹೆಚ್ಚು ಖ್ಯಾತಿ ಕೊಟ್ಟಿತ್ತು. ಇದಾದ ನಂತ್ರ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ಮೋಹನ ಹಾಸ್ಯ ನಟನಾಗಿ ಮಿಂಚಿದ್ದರು. ತುಂಭಾ ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಅವರನ್ನು ಲಿವರ್ ಸಮಸ್ಯೆ ಹಾಸ್ಯನಟನನ್ನು ಇನ್ನಿಲ್ಲದಂತೆ ಕಾಡಿತ್ತು.

ಅನಾರೋಗ್ಯ ಸಮಸ್ಯೆ ಹೆಚ್ಚಾದ ಹಿನ್ನೆಲೆ ಕುಟುಂಬದವರು ಚಿಕ್ಕಬಾಣವರದ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಿದ್ದರು. ಅದರೆ ಚಿಕಿತ್ಸೆ ಫಲಿಸದೆ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಮೋಹನ್ ಅವರು ತಾಯಿ ,ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

Facebook Comments

Sri Raghav

Admin