ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಡಿ.16- ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ತಮಗೆ ಅವಕಾಶ ನೀಡಿದರೆ ಜವಾಬ್ದಾರಿ ನಿರ್ವಹಿಸುವುದಾಗಿ ತಿಳಿಸಿದರು.

ಈ ಹಿಂದೆ ತಮಗೆ ಪಕ್ಷ ಸಾಕಷ್ಟು ಜವಾಬ್ದಾರಿಯನ್ನು ನೀಡಿದೆ. ಅದನ್ನು ನಿಭಾಯಿಸಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಿರ್ಧಾರಕ್ಕೆ ತಾವು ಬದ್ಧವಾಗಿದ್ದೇವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವುದಿಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

Facebook Comments