ಪ್ರಿಯತಮೆಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.5- ಪ್ರಿಯತಮೆ ಯನ್ನು ಕೊಂದು ಪ್ರಿಯಕರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಂಡೇಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಫುಡ್ ಡೆಲಿವರಿಬಾಯ್ ರಾಜು (24) ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಜೋಷಿ ಶ್ರೀನಾಥ್ ಮಹದೇವ್ ಅವರು ಈಸಂಜೆಗೆ ತಿಳಿಸಿದ್ದಾರೆ.

ರಾಜುವಿನ ರೂಂನಲ್ಲಿ ಆತನ ಪ್ರಿಯತಮೆ ಸಾವನ್ನಪ್ಪಿದ್ದಾಳೆ. ನಂತರ ರಾಜು ಮನೆಗೆ ಬೀಗ ಹಾಕಿಕೊಂಡು ಹೋಗಿ ರೈಲಿಗೆ ಸಿಕ್ಕಿ ಆತ್ಮಹತ್ಯೆಗೆ ಯತ್ನಿಸಿ ಗಾಯಗೊಂಡಿದ್ದಾನೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಹೋಗಿ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪ್ರಾಪ್ತ ಬಾಲಕಿ ತಂದೆ ನನ್ನ ಮಗಳನ್ನು ಕೊಲೆ ಮಾಡಲಾಗಿದೆ ಎಂದು ಬಂಡೇಪಾಳ್ಯ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬಾಲಕಿ ಮೃತಪಟ್ಟಿರುವ ಕೊಠಡಿಗೆ ಎಫ್‍ಎಸ್‍ಎಲ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪ್ರಾಪ್ತ ಬಾಲಕಿ ಹೇಗೆ ಸಾವನ್ನಪ್ಪಿದ್ದಾಳೆ ಎಂಬುದು ಮರಣೋತ್ತರ ವರದಿ ಬಂದ ನಂತರವೇ ಗೊತ್ತಾಗಲಿದೆ.

Facebook Comments