ಕೆಪಿಸಿಸಿ ವಕ್ತಾರರಾಗಿ ಕಿಮ್ಮನೆ ರತ್ನಾಕರ್ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.22- ಕೆಪಿಸಿಸಿ ವಕ್ತಾರರಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಕಾಂಗ್ರೆಸ್ ಪಕ್ಷದ ಪ್ಯಾನಲಿಸ್ಟ್ ಆಗಿ ಸುದೀರ್‍ಕುಮಾರ್ ಮರೋಳಿ ಅವರನ್ನು ನೇಮಕ ಮಾಡಲಾಗಿದೆ.  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಬಹುಮುಖ್ಯವಾದ ಪಾತ್ರವನ್ನು ವಹಿಸುತ್ತದೆ.

ಇತ್ತೀಚಿನ ದಿನಗಳಲ್ಲಿ ದೃಶ್ಯ, ಮುದ್ರಣ ಹಾಗೂ ಸಾಮಾಜಿಕ ಜಾಲತಾಣಗಳು ಸಾರ್ವಜನಿಕವಾಗಿ ಮಹತ್ವದ ವಿಷಯದ ಬಗ್ಗೆ ಚರ್ಚೆಯ ನೇತೃತ್ವ ವಹಿಸುತ್ತಿವೆ.

ನಮ್ಮ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅತ್ಯಂತ ಅವಶ್ಯಕವಾಗಿದೆ.  ಈ ಹಿನ್ನೆಯಲ್ಲಿ ತಮ್ಮ ಅನುಭವ ಮತ್ತು ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮಥ್ರ್ಯ ತಮಗಿದೆ ಎಂದು ಗಮನಿಸಿ ಕಿಮ್ಮನೆ ರತ್ನಾಕರ್ ಅವರನ್ನು ವಕ್ತಾರರನ್ನಾಗಿ ಹಾಗೂ ಸುಧೀರ್ ಕುಮಾರ್ ಮರೋಳಿ ಅವರನ್ನು ಕೆಪಿಸಿಸಿ ಪ್ಯಾನಲಿಸ್ಟ್ ಆಗಿ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Facebook Comments