ದೇಶದ 9.5 ಲಕ್ಷ ರೈತರ ಖಾತೆಗಳಿಗೆ 20 ಸಾವಿರ ಕೋಟಿ.ರೂ.ಜಮಾ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಮೇ.14-ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ಯೋಜನೆಯ ಎಂಟನೆ ಕಂತಿನ 20 ಸಾವಿರ ಕೋಟಿ ರೂ.ಗಳು ದೇಶದ 9.5 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಜಮಾ ಆಗಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ವರ್ಷ ಕೇಂದ್ರ ಸರ್ಕಾರ ದೇಶದ್ಯಾಂತ ಇರುವ 14ಕೋಟಿಗೂ ಹೆಚ್ಚು ರೈತ ಕುಟುಂಬಗಳಿಗೆ ತಲಾ ಎರಡು ಸಾವಿರ ರೂ.ಗಳಂತೆ ಮೂರು ಕಂತುಗಳಲ್ಲಿ 6 ಸಾವಿರ ರೂ.ಹಣ ಜಮಾ ಮಾಡುತ್ತಿದೆ.

ಇಂದು ಯೋಜನೆಯ ಎಂಟನೆ ಕಂತಿನ 20 ಸಾವಿರ ಕೋಟಿ ರೂ.ಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ರೈತರ ಖಾತೆಗಳಿಗೆ ಜಮಾ ಮಾಡಿದರು. ಹಣ ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ಪಶ್ಚಿಮ ಬಂಗಾಳದ 7 ಲಕ್ಷಕ್ಕೂ ಹೆಚ್ಚು ರೈತರು ಯೋಜನೆಗೆ ಸೇರ್ಪಡೆಗೊಂಡಿದ್ದು ಅವರ ಖಾತೆಗಳಿಗೂ ಹಣ ಜಮಾ ಮಾಡಲಾಗಿದೆ ಎಂದು ತಿಳಿಸಿದರು.

ಕಳೆದ 2019ರಲ್ಲಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ಬಂದಾಗ ದೇಶದ ರೈತ ಕುಟುಂಬಗಳಿಗೆ 1.15 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿತ್ತು.

Facebook Comments

Sri Raghav

Admin