ಬೆಂಗಳೂರು ಚಾಕು ಇರಿತ ಪ್ರಕರಣ : ಇಂದು ಮತ್ತೊಬ್ಬ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.19- ದಾರಿಯಲ್ಲಿ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಇರಿದು ಪುಂಡಾಟ ಮೆರೆದಿದ್ದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಗಾಯಾಳು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.  ರಾಜೇಶ್(28) ಚಿಕಿತ್ಸೆ ಫಲಿಸದೆ ಮೃತಪಟ್ಟ ಅಮಾಯಕ ಯುವಕ.

ನಿನ್ನೆ ಬೆಳಗ್ಗೆ ಕಾಟನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಣೇಶ್ ಎಂಬ ಕಾರ್ಮಿಕ ಬಾಳೆಕಾಯಿ ಮಂಡಿ ಪ್ರದೇಶದಲ್ಲಿನ ಮಾಂಸದಂಗಡಿಯಲ್ಲಿದ್ದ ಚಾಕು ತೆಗೆದುಕೊಂಡು ರಸ್ತೆಯಲ್ಲಿ ಹೋಗುತ್ತಿದ್ದ ಹಲವರಿಗೆ ಇರಿದು ಗಾಯಗೊಳಿಸಿದ್ದನು. ಇರಿತದಿಂದ ಗಂಭೀರ ಗಾಯಗೊಂಡಿದ್ದ ಮಾರಿ ಎಂಬುವರು ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ಏಳು ಮಂದಿಯನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು.  ಈ ಪೈಕಿ ರಾಜೇಶ್ ಎಂಬುವರು ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments