ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.5- ದುಷ್ಕರ್ಮಿ ಗಳಿಂದ ಚಾಕು ಇರಿತಕ್ಕೆ ಒಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಹೊರಮಾವು ನಿವಾಸಿ ಲಕ್ಷ್ಮಣ್ ಮೃತಪಟ್ಟಿರುವ ವ್ಯಕ್ತಿಯಾಗಿದ್ದು, ಇವರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಫೆ.3ರಂದು ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಔಟರ್ ರಿಂಗ್‍ರಸ್ತೆ ಮೂಲಕ ಮಹದೇವಪುರ ಬ್ರಿಡ್ಜ್ ಮೇಲೆ ದ್ವಿಚಕ್ರ ವಾಹನದಲ್ಲಿ ಲಕ್ಷ್ಮಣ್ ಅವರು ಹೋಗುತ್ತಿದ್ದಾಗ ಡಿಯೋ ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಇವರ ವಾಹನ ಅಡ್ಡಗಟ್ಟಿ ಚಾಕುವಿನಿಂದ ಹೊಟ್ಟೆ ಹಾಗೂ ಇನ್ನಿತರ ಭಾಗಗಳಿಗೆ ಬಲವಾಗಿ ಇರಿದು ಪರಾರಿಯಾಗಿದ್ದರು.

ವಿಷಯ ತಿಳಿದು ಬೀಟ್‍ನಲ್ಲಿದ್ದ ಕಾನ್ಸ್‍ಟೆಬಲ್ ಹಾಗೂ ಸಿಬ್ಬಂದಿ ತಕ್ಷಣ ಬೆನ್ನಟ್ಟಿ ಒಬ್ಬಾತನನ್ನು ವಶಕ್ಕೆ ಪಡೆದಿದ್ದರು. ಇತ್ತ ಚಾಕು ಇರಿತದಿಂದ ಗಂಭೀರ ಗಾಯಗೊಂಡಿದ್ದ ಲಕ್ಷ್ಮಣ್ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಲಕ್ಷ್ಮಣ್ ಅವರು ನಿನ್ನೆ ಮೃತಪಟ್ಟಿದ್ದಾರೆ ಎಂದು ಡಿಸಿಪಿ ಅನುಚೇತ್ ಈ ಸಂಜೆಗೆ ತಿಳಿಸಿದ್ದಾರೆ.

ಹಣಕಾಸು ವಿಚಾರವಾಗಿ ಈ ಘಟನೆ ನಡೆದಿರಬಹುದೆಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ತಲೆಮರೆಸಿಕೊಂಡಿರುವ ಆರೋಪಿ ಸಿಕ್ಕ ಬಳಿಕವಷ್ಟೇ ನಿಖರ ಕಾರಣ ತಿಳಿದುಬರಲಿದೆ.

Facebook Comments