ಕೋಚಿಮುಲ್ ನಿರ್ದೇಶಕ ಸ್ಥಾನಕ್ಕೆ ಮತದಾನ

ಈ ಸುದ್ದಿಯನ್ನು ಶೇರ್ ಮಾಡಿ

ಕೋಲಾರ, ಮೇ 13- ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ಭಾರೀ ಬಿರುಸಿನಿಂದ ನಡೆಯಿತು.
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ 13 ಸ್ಥಾನಗಳಿಗೆ ಚುನಾವಣೆ ನಡೆಯಿತು. ಅದರಲ್ಲಿ 4 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿರುವುದರಿಂದ 9 ಸ್ಥಾನಗಳಿಗೆ ಮತದಾನ ನಡೆಯಿತು.

ಮಾಲೂರು ತಾಲೂಕಿನ ಮತದಾರರನ್ನು ಕ್ಷೇತ್ರದ ಶಾಸಕ ಹಾಗೂ ಸ್ಪರ್ಧಿ ಕೆ.ವೈ.ನಂಜೇಗೌಡ ನೇತೃತ್ವದಲ್ಲಿ ಅವರ ಗುಂಪಿನ ಮತದಾರರನ್ನು ಭಾರೀ ಬಂದೋಬಸ್ತ್‍ನಲ್ಲಿ ಬೌನ್ಸರ್‍ಗಳ ಸಮೇತ ಮತ ಕೇಂದ್ರಕ್ಕೆ ಕರೆತರುವ ಸಂದರ್ಭದಲ್ಲಿ ಮಾಜಿ ಶಾಸಕರ ಬೆಂಬಲಿಗರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಸಂದರ್ಭದಲ್ಲಿ ಪೊಲೀಸರು ಬೆತ್ತ ಪ್ರಹಾರ ಮಾಡಿದರು.

ನಂತರ ಮತದಾರರೊಂದಿಗೆ ಬಂದಿದ್ದ ಬೆಂಬಲಿಗರು ಚೆಲ್ಲಾಪಿಲ್ಲಿ ಯಾದರು. ಮತಕೇಂದ್ರದ ಸುತ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಅಭ್ಯರ್ಥಿಗಳ ಪರವಾಗಿ ದೊಡ್ಡ ದೊಡ್ಡ ಪೆಂಡಾಲ್‍ಗಳನ್ನು ಹಾಕಿ ಬೆಂಬಲಿಗರು ಬೆಂಬಲ ವ್ಯಕ್ತಪಡಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ