ಕೊಡಗು ಪ್ರವಾಹ : ವಿ.ಪ್ರ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಿಂದ 1 ಕೋಟಿ ನೆರವು

ಈ ಸುದ್ದಿಯನ್ನು ಶೇರ್ ಮಾಡಿ

lehar-singh
ಬೆಂಗಳೂರು,ಆ.24- ಕೊಡಗಿನ ನೆರೆ ಸಂತ್ರಸ್ತರ ಪುನರ್ ವಸತಿಗೆ ಒಂದು ಕೋಟಿ ರೂ. ನೀಡುವುದಾಗಿ ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಒಂದು ಕೋಟಿ ರೂ.ಗಳನ್ನು ಕೊಡಗಿನ ನೆರೆಸಂತ್ರಸ್ತರಿಗೆ ನೀಡಲಾಗುವುದು ಎಂದು ಹೇಳಿದರು.
ಇನ್ನು ಹೆಚ್ಚು ಹಣ ಕೊಡಲು ಕೂಡ ನಿಮ್ಮ ನಮ್ಮಂತೆಯೇ ಇತರೆ ವಿಧಾನಪರಿಷತ್ ಸದಸ್ಯರೂ ಕೂಡ ಪರಿಹಾರ ನೀಡಲು ಮುಂದೆಬರಬೇಕು. ದೇಶದ ರಕ್ಷಣೆಗೆ ಕೊಡಗು ಸಾಕಷ್ಟು ಸೈನಿಕರನ್ನು ನೀಡಿದೆ. ಗಡಿ ಕಾಪಾಡುವಲ್ಲಿ ಅವರ ಪಾತ್ರ ಮುಖ್ಯವಾಗಿದೆ. ಇತ್ತೀಚೆಗೆ ಅತಿಯಾದ ಮಳೆಯಾಗಿ ಅಲ್ಲಿ ಪ್ರವಾಹ ಉಂಟಾಗಿದೆ. ಅವರಿಗೆ ಸಹಾಯ ಮಾಡುವ ಉದ್ದೇಶದಿಂದ ಒಂದು ಕೋಟಿ ರೂ. ನೀಡಲಾಗುತ್ತಿದೆ ಹಾಗೂ ಮುಖ್ಯಮಂತ್ರಿ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.
ಜಿಲ್ಲಾಡಳಿತದ ಮೂಲಕ ಕೊಡಗಿನ ನೆರೆ ಸಂತ್ರಸ್ತರಿಗೆ ಪುನರ್ ವಸತಿ ಕಟ್ಟಲು ಈ ಹಣ ಬಳಕೆ ಮಾಡಲಾಗುವುದು ಎಂದು ಲೆಹರ್ ಸಿಂಗ್ ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin