ಕಳೆದ ವರ್ಷಕ್ಕಿಂತ ಈ ವರ್ಷ ಕೊಡಗಿನಲ್ಲಿ ಶೇ.50ರಷ್ಟು ಕಡಿಮೆ ಮಳೆ

ಈ ಸುದ್ದಿಯನ್ನು ಶೇರ್ ಮಾಡಿ

ಮಡಿಕೇರಿ,ಆ.6- ರಾಜ್ಯದ ಜೀವನಾಡಿ ಕಾವೇರಿ ಹುಟ್ಟುವ ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಶೇ.50ರಷ್ಟು ಮಳೆ ಕಡಿಮೆಯಾಗಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ 2634.29 ಮಿ.ಮೀನಷ್ಟು ಮಳೆಯಾಗಿತ್ತು. ಅತಿವೃಷ್ಟಿ ಉಂಟಾಗಿ ಅಪಾರ ಪ್ರಮಾಣದ ಹಾನಿಯಾಗಿ ಜನ ಜೀವನ ಅಸ್ತವ್ಯಸ್ತವಾಗಿತ್ತು.

ಈ ವರ್ಷ ನಿನ್ನೆಯವರೆಗೆ 1158.82 ಮಿ. ಮೀನಷ್ಟು ಮಾತ್ರ ಮಳೆಯಾಗಿದೆ. ಹೀಗಾಗಿ ಕಾವೇರಿ ಜಲಾನಯನ ಭಾಗದ ಜಲಾಶಯ ಗಳು ಭರ್ತಿಯಾಗಿಲ್ಲ. ಜಿಲ್ಲೆಯಲ್ಲಿ ನಿನ್ನೆ ಸರಾ ಸರಿ 76.97 ಮಿ.ಮೀನಷ್ಟು ಮಳೆಯಾಗಿದೆ.

ಕಳೆದೆರಡು ದಿನಗಳಿಂದ ಮುಂಗಾರು ಚುರಕ್ಕಾಗಿದ್ದು ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಮಡಿಕೇರಿ ತಾಲ್ಲೂಕಿನಲ್ಲಿ 95.10 ಮಿ.ಮೀ, ವಿರಾಜಪೇಟೆ ತಾಲ್ಲೂಕಿನಲ್ಲಿ 77.92 ಮಿ.ಮೀ, ಸೋಮವಾರಪೇಟೆಯಲ್ಲಿ 57.89 ಮಿ.ಮೀ ಮಳೆಯಾಗಿದೆ.

ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮಳೆ ಕಡಿಮೆಯಾಗಿದೆ. ತಲಕಾಡು, ಮಡಿಕೇರಿ ನಾಕೋಪಲು, ಸಂಪಾಜೆ, ಬಾಗಮಂಗಲ, ಶ್ರಿಮಂಗಲ, ಪೊನ್ನಂಪೇಟೆ ಮೊದಲಾದ ಕಡೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ.

Facebook Comments