ಮುನಿಯಪ್ಪ 8ನೇ ಗೆಲುವಿನ ಕನಸಿಗೆ ತಣ್ಣೀರೆರಚಿದ ಮುನಿಸ್ವಾಮಿ..!

ಈ ಸುದ್ದಿಯನ್ನು ಶೇರ್ ಮಾಡಿ

ಕೋಲಾರ,ಮೇ 23- ಸತತ ಏಳು ಬಾರಿ ನಿರಂತರ ಗೆಲುವು ಸಾಧಿಸಿ ಸೋಲಿಲ್ಲದ ಸರದಾರ ಎಂದು ಗುರುತಿಸಿಕೊಂಡಿದ್ದ ಕೆ.ಎಚ್.ಮುನಿಯಪ್ಪ ಅವರ 8ನೇ ಗೆಲುವಿಗೆ ಬಿಬಿಎಂಪಿ ಸದಸ್ಯ ಮುನಿಸ್ವಾಮಿ ಕಂಟಕರಾಗಿದ್ದಾರೆ.

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿದ್ದ ಬೆಂಗಳೂರಿನ ಕಾಡುಗೋಡಿ ಬಿಬಿಎಂಪಿ ಸದಸ್ಯ ಮುನಿಸ್ವಾಮಿ ಭಾರೀ ಅಂತರದಿಂದ ಗೆಲುವು ಸಾಧಿಸಿ ಮುನಿಯಪ್ಪ ಅವರಿಗೆ ಮಣ್ಣು ಮುಕ್ಕಿಸಿದ್ದಾರೆ. [ LOKSABHA ELECTIONS 2019 RESULT – Live Updates]

ಹಾಲಿ ಬಿಬಿಎಂಪಿ ಸದಸ್ಯರೊಬ್ಬರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿರುವುದು ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗಿದೆ. ಬಿಬಿಎಂಪಿ ಸದಸ್ಯರಾಗಿದ್ದುಕೊಂಡೇ ಹಲವಾರು ಮಂದಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಇದುವರೆಗೂ ಯಾವೊಬ್ಬ ಸದಸ್ಯರು ಲೋಕಸಭೆ ಪ್ರವೇಶಿಸಿರಲಿಲ್ಲ.

ಇದೀಗ ಕಾಡುಗೋಡಿ ಬಿಬಿಎಂಪಿ ಸದಸ್ಯ ಮುನಿಸ್ವಾಮಿ ಅವರು ಹಿರಿಯ ಕಾಂಗ್ರೆಸಿಗ ಕೆ.ಎಚ್.ಮುನಿಯಪ್ಪ ಅವರನ್ನು ಮಣಿಸುವ ಮೂಲಕ ಇತಿಹಾಸ ಬರೆದಿದ್ದಾರೆ.

ಗೆಲುವಿಗೆ ಕಾರಣವೇನು?:  ಎಷ್ಟೇ ವಿರೋಧವಿದ್ದರೂ ಕೋಲಾರದಲ್ಲಿ ಕೆ.ಎಚ್.ಮುನಿಯಪ್ಪ ಅವರಿಗೆ ಸೋಲುಣಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ನನ್ನನ್ನು ಕಟ್ಟಿ ಹಾಕಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಭ್ರಮೆಯಲ್ಲಿದ್ದರು ಅವರು. [ LOKSABHA ELECTIONS 2019 RESULT – Live Updates]

ಮುನಿಯಪ್ಪ ಅವರ ಈ ಧೋರಣೆ ವಿರುದ್ಧ ಸಿಡಿದು ನಿಂತ ಸ್ಥಳೀಯ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಪರೋಕ್ಷವಾಗಿ ಮುನಿಸ್ವಾಮಿ ಬೆನ್ನಿಗೆ ನಿಂತ ಕಾರಣ ಬಿಜೆಪಿ ಅಭ್ಯರ್ಥಿ ಇಲ್ಲಿ ಗೆದ್ದಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin