ಕೋಟಾ ಶ್ರೀನಿವಾಸ ಪೂಜಾರಿ ಪರಿಷತ್ ಸಭಾನಾಯಕ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.9- ವಿಧಾನ ಪರಿಷತ್ ಸಭಾನಾಯಕರನ್ನಾಗಿ ಮುಜ ರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದ್ದು, ಅದಕ್ಕೂ ಮುನ್ನ ವಿಧಾನಪರಿಷತ್ ಸಭಾನಾಯಕರ ಆಯ್ಕೆ ಮಾಡ ಬೇಕಿದ್ದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯರಾಗಿ ಸಚಿವ ಸ್ಥಾನದ ಜವಾಬ್ದಾರಿ ನಿರ್ವಹಿಸುತ್ತಿರುವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಸಭಾನಾಯಕರನ್ನಾಗಿ ನೇಮಕಗೊಳಿಸಿ ಸಭಾಪತಿಗಳಿಗೆ ಬಿಎಸ್‍ವೈ ಪತ್ರ ಕಳುಹಿಸಿಕೊಟ್ಟಿದ್ದಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಪರಿಷತ್ ಪ್ರತಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಿದ್ದ ಕೋಟಾ ಶ್ರೀನಿವಾಸ ಪೂಜಾರಿ, ಆಡಳಿತ ಪಕ್ಷದ ವಿರುದ್ಧ ಸಮರ್ಥ ವಾಗಿ ಕೆಲಸ ಮಾಡಿದ್ದರು.

ಇದೀಗ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕರಾಗಿದ್ದ ಕೋಟಾ ಶ್ರೀನಿವಾಸ ಅವರನ್ನು ಸಭಾನಾಯಕರನ್ನಾಗಿ ನೇಮಕ ಮಾಡಲಾಗಿದೆ.

Facebook Comments