ಪೊಲೀಸರು ಎಲ್ಲಿ ತಡೆಯುತ್ತಾರೋ ಅಲ್ಲೇ ಪ್ರತಿಭಟನೆ ಮಾಡಿ : ರೈತರಿಗೆ ಡಿಕೆಶಿ ಕರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.20- ಶಾಂತಿಯುತವಾಗಿ ನಡೆಯಬೇಕಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ರಾಜ್ಯಭವನ ಚಲೋ ನಡೆಸಲು ಕಾಂಗ್ರೆಸ್ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಸಾವಿರಾರು ಮಂದಿ ವಿವಿಧ ಜಿಲ್ಲೆಗಳಿಂದ ಆಗಮಿಸುತ್ತಿದ್ದರು.

ಬೆಂಗಳೂರಿನಲ್ಲಿ ಹೆಚ್ಚಿನದಾಗಿ ಜನ ದಟ್ಟಣೆ ಉಂಟಾಗುವುದನ್ನು ತಪ್ಪಿಸಲು ಪೊಲೀಸರು ಆಯಾ ಜಿಲ್ಲಾ ಕೇಂದ್ರಗಳಲ್ಲೇ ಕಾರ್ಯರ್ತರನ್ನು ಅಡ್ಡಗಟ್ಟಿ ಅವರನ್ನು ತಡೆಯುವ ಪ್ರಯತ್ನ ಮಾಡಿದರು. ದೂರದ ಊರುಗಳಿಂದ ಬೆಂಗಳೂರಿಗೆ ಬರಲು ನಿನ್ನೆಯೇ ಪ್ರಯಾಣ ಆರಂಭಿಸಿದವರು ಮಧ್ಯ ರಾತ್ರಿ ಪೊಲೀಸರು ತಡೆಯುತ್ತಿದ್ದಂತೆ ಆಕ್ರೋಶಗೊಂಡು ಹಿರಿಯ ನಾಯಕರನ್ನು ಸಂಪರ್ಕಿಸಲಾರಂಭಿಸಿದರು.

ಹೀಗಾಗಿ ಹಿರಿಯ ಸದಸ್ಯರ ಮೂಲಕ ಕಾರ್ಯಕರ್ತರಿಗೆ ಸ್ಪಷ್ಟ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್, ಪೊಲೀಸರು ಎಲ್ಲಿ ತಡೆಯುತ್ತಾರೋ ಅಲ್ಲಿಯೇ ಶಾಂತಿಯುತ ಪ್ರತಿಭಟನೆ ಮಾಡಿ, ರಸ್ತೆ ತಡೆ ನಡೆಸಿ ಎಂದು ಸಲಹೆ ನೀಡಿದರು.

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಹಕ್ಕಿದೆ. ಜನ ವಿರೋ ಅನುಸರಿಸುತ್ತಿರುವ ಬಿಜೆಪಿ ಸರ್ಕಾರ ಪ್ರತಿಭಟನೆಗೂ ಅವಕಾಶ ಕೊಡದೆ ಸರ್ವಾಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಕಿಡಿಕಾರಿದರು.

ಅಧ್ಯಕ್ಷರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು ಬಹಳಷ್ಟು ಕಡೆ ಜಿಲ್ಲಾ ಕೇಂದ್ರಗಳಲ್ಲೇ ಪ್ರತಿಭಟನೆ ನಡೆಸಿ ರಾಜಭವನ ಚಲೋಗೆ ಬೆಂಬಲ ಸೂಚಿಸಿದರು.

Facebook Comments

Sri Raghav

Admin