ಕೆಪಿಎಲ್ ಕಳ್ಳಾಟ ತನಿಖೆಗೆ ಐಸಿಸಿ ಸಹಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.29- ಕೆಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಭರವಸೆ ನೀಡಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಭಾಸ್ಕರರಾವ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿಂದು ಅವರು ಕ್ರಿಕೆಟ್ ಬೆಟ್ಟಿಂಗ್ ಹಗರಣದ ಬಗ್ಗೆ ತಾವು ಪತ್ರ ಬರೆದಾಗ ಅದಕ್ಕೆ ಪ್ರತಿಕ್ರಿಯಿಸಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದೆ. ಅದೇ ರೀತಿ ಬಿಸಿಸಿಐ ಜೊತೆಯಲ್ಲೂ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ತನಿಖೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಶೀಘ್ರವೇ ಎಲ್ಲಾ ವಿವರಗಳೊಂದಿಗೆ ಮಾಹಿತಿ ನೀಡುತ್ತೇವೆ ಎಂದು ಹೇಳಿದರು.

Facebook Comments