ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಒಟ್ಟು1279 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 09-03-2020 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 09-04-2020ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದ್ದಿದು, ಅರ್ಜಿ ಸಲ್ಲಿಕೆ ವೇಳೆ ಈ ಬಗ್ಗೆ ಅಂಕಗಳು ಮತ್ತು ಅಂಕಪಟ್ಟಿಯನ್ನು ಅಪ್ಲೋಡ್ಮಾಡಬೇಕು. ಕನ್ನಡ ಮಾಧ್ಯಮ ಅಭ್ಯರ್ಥಿ, ಗ್ರಾಮೀಣ ಮಾಧ್ಯಮ ಅಭ್ಯರ್ಥಿ ಮೀಸಲಾತಿಗಳು ಇದ್ದು, ಪ್ರಮಾಣ ಪತ್ರಗಳನ್ನು ಒದಗಿಸಬೇಕು.

ಕನಿಷ್ಟ 18 ರಿಂದ ಗರಿಷ್ಟ 35 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು, ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಇನ್ನು ಅರ್ಜಿ ಸಲ್ಲಿಸಿದ ನಂತರ ಸಾಮಾನ್ಯ ವರ್ಗ 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 635 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 335 ರೂ. ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಈ ಹುದ್ದೆಗಳ ಕರ್ನಾಟಕ ಲೋಕಸೇವಾ ಆಯೋಗ ನೆಡೆಸುವಂತಹ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಆನ್‌ಲೈನ್‌ಮೂಲಕ ಅರ್ಜಿ ಸಲ್ಲಿಸಬೇಕು, ಕರ್ನಾಟಕ ಲೋಕಸೇವಾ ಆಯೋಗದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ವೆಬ್‌ಸೈಟ್‌  http://www.kpsc.kar.nic.in/ಗೆ ಭೇಟಿ ನೀಡಿ, ಆನ್‌ಲೈನ್‌ಮೂಲಕ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಗೆ ಭೇಟಿ ನೀಡಿ

Facebook Comments