ಬ್ಯಾಟರಾಯನಪುರದಲ್ಲಿ ಶೇ.75ರಷ್ಟು ಕಸ : ಸಮಸ್ಯೆ ಪರಿಹರಿಸುವಂತೆಸಿಎಂಗೆ ಕೃಷ್ಣಬೈರೇಗೌಡ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.13- ನಗರದ ಶೇ.75ರಷ್ಟು ಕಸವನ್ನು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ವಿಲೇವಾರಿ ಮಾಡಲಾಗುತ್ತಿದ್ದು, ಕೂಡಲೇ ಇದನ್ನು ಪರಿಹರಿಸಬೇಕೆಂದು ಮಾಜಿ ಸಚಿವ ಹಾಗೂ ಶಾಸಕ ಕೃಷ್ಣಬೈರೇಗೌಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಯಡಿಯೂರಪ್ಪನವರನ್ನು ಭೇಟಿ ಮಾಡಿದ ಕೃಷ್ಣಬೈರೇಗೌಡರು, ನಗರದ ಬಹುತೇಕ ಕಸವನ್ನು ನನ್ನ ಕ್ಷೇತ್ರದಲ್ಲೇ ವಿಲೇವಾರಿ ಮಾಡಲಾಗುತ್ತಿದೆ. ಇದರಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೂಡಲೇ ಸಮಸ್ಯೆ ಪರಿಹರಿಸಬೇಕೆಂದು ಒತ್ತಾಯಿಸಿದರು. ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಮತ್ತು ಆಯುಕ್ತರ ಜತೆ ಚರ್ಚೆ ಮಾಡಿ ಸಮಸ್ಯೆಯನ್ನು ಪರಿಹರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣಬೈರೇಗೌಡ, ನನ್ನ ಕ್ಷೇತ್ರ ವ್ಯಾಪ್ತಿಯ ಬ್ಯಾಟರಾಯನಪುರದಲ್ಲಿ ಶೇ.75ರಷ್ಟು ಕಸವನ್ನು ವಿಲೇವಾರಿ ಮಾಡಲಾಗುತ್ತಿದೆ. ಪರಿಣಾಮ ರೋಗ ರುಜಿನಗಳು ಯೆಥೇಚ್ಚವಾಗಿ ಹೆಚ್ಚಾಗುತ್ತಿದೆ. ಈಗಾಗಲೇ ಸಾರ್ವಜನಿಕರು ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ವಸ್ತು ಸ್ಥಿತಿಯನ್ನು ಮನವರಿಕೆ ಮಾಡಿದ್ದೇನೆ. ಅವರಿಂದ ಸೂಕ್ತವಾದ ಭರವಸೆ ಸಿಕ್ಕಿದೆ ಎಂದರು.

ಇನ್ನು ಹಿಂದಿನ ಸರ್ಕಾರದಲ್ಲಿ ನಗರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಲಾಗಿತ್ತು. ಇದನ್ನು ಬಳಸಿಕೊಳ್ಳುವಲ್ಲಿ ತಾರತಮ್ಯ ಮಾಡದಂತೆ ಮನವಿ ಮಾಡಿದ್ದೇನೆ. ಇದಕ್ಕೆ ಸಿಎಂ ಸೂಕ್ತವಾಗಿ ಸ್ಪಂದಿಸಿದ್ದಾರೆ ಎಂದು ಕೃಷ್ಣಬೈರೇಗೌಡ ಹೇಳಿದರು.

Facebook Comments