‘ಕೆಆರ್‌ಎಸ್‌ ಜಲಾಶಯಕ್ಕೆ ಯಾವುದೇ ಅಪಾಯವಿಲ್ಲ’

ಈ ಸುದ್ದಿಯನ್ನು ಶೇರ್ ಮಾಡಿ

CS-Puttarajuಮೈಸೂರು, ಜ.25- ಕೃಷ್ಣರಾಜ ಸಾಗರ ಜಲಾಶಯಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.

ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‍ಎಸ್ ಸುತ್ತಮುತ್ತಲ ಗಣಿಗಾರಿಕೆಯಲ್ಲಿ ಸಿಡಿಮದ್ದು ಬಳಕೆಯಿಂದ ಜಲಾಶಯಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ.

ಈ ಸಂಬಂಧ ಕಾವೇರಿ ನೀರಾವರಿ ನಿಗಮದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಪುಣೆ ಮತ್ತು ದೆಹಲಿಯ ತಜ್ಞರಿಂದ ತನಿಖೆ ಕೈಗೊಳ್ಳಲಾಗಿದೆ. ಇದರ ಪೂರ್ಣ ವರದಿ ಬಂದ ನಂತರ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ಬೇಬಿ ಬೆಟ್ಟದಲ್ಲಿ ಸ್ಫೋಟಕ ಬಳಸಿ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಜ್ಞರೊಂದಿಗೆ ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಕೆಆರ್‍ಎಸ್ ಮತ್ತು ಕಾವೇರಿ ಜಲಾನಯನ ಪ್ರದೇಶಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕ್ರೀಡಾಕೂಟ: ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಜ.28 ರಿಂದ 30ರವರೆಗೆ 3 ದಿನಗಳ ಕಾಲ ರಾಜ್ಯಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ನಗರದ ಚಾಮುಂಡಿ ವಿಹಾರ ಕ್ರೀಡಾಂಗಣಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಸಚಿವರು ಮೈದಾನದ ಪರಿಶೀಲನೆ ನಡೆಸಿ ಮಾತನಾಡಿದರು.

28 ರಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಮರಣ ಸಂಚಿಕ ಬಿಡುಗಡೆ ಮಾಡಲಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಮತ್ತಿತರರು ಭಾಗವಹಿಸಲಿದ್ದಾರೆ.

ಒಟ್ಟು ಈ ಕ್ರೀಡಾಕೂಟದಲ್ಲಿ 12 ಸಾವಿರ ಮಂದಿ ನೌಕರರು ಭಾಗವಹಿಸಲಿದ್ದು, ಈ ಪೈಕಿ 4 ಸಾವಿರ ಕ್ರೀಡಾಪಟುಗಳು ರಾಜ್ಯದ 30 ಜಿಲ್ಲೆಗಳಿಂದ ಸ್ಪರ್ಧಿಸಲಿದ್ದಾರೆ ಎಂದು ವಿವರಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ