ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಗೆ ಮೈತುಂಬಿ ಹರಿಯುತ್ತಿರುವ ಕೃಷ್ಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬಾಗಲಕೋಟೆ, ಜು.3- ರಣ ಬಿಸಿಲಿಗೆ ಬರಿದಾಗಿದ್ದ ಕೃಷ್ಣಾ ನದಿಗೆ ಈಗ ಜೀವ ಬಂದಿದೆ.  ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದೆ. ಈ ಹಿನ್ನೆಲೆ ನದಿ ತೀರದ ಗ್ರಾಮಗಳ ನಡುವೆ ಸಂಪರ್ಕಕ್ಕಾಗಿ ಜನರು ದೋಣಿಯಾನ ಮಾಡುವಂತಾಗಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮಹಿಷವಾಡಗಿ ಹಾಗೂ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ಪಟ್ಟಣಕ್ಕೆ ಹೋಗಬೇಕೆಂದರೆ ದೋಣಿಯಲ್ಲೇ ಸಾಗಬೇಕು. ದೋಣಿಯಲ್ಲಿ ಬೈಕ್ ಇಟ್ಟುಕೊಂಡು ಜನರು ಒಂದು ದಡದಿಂದ ಇನ್ನೊಂದು ದಡಕ್ಕೆ ಹೋಗುತ್ತಿದ್ದಾರೆ.

ವ್ಯಾಪಾರಸ್ಥರು, ಸಂತೆಗೆ ಹೊರಡುವವರು, ರೈತರು ಎಲ್ಲರಿಗೂ ಸಂಚಾರಕ್ಕೆ ದೋಣಿಯೇ ಆಸರೆಯಾಗಿದೆ. ಸ್ವಲ್ಪ ಆಯ ತಪ್ಪಿದರೂ ನದಿಪಾಲಾಗುವ ಸಾಧ್ಯತೆ ಇರುವುದರಿಂದ ಜೀವ ಕೈಯಲ್ಲಿ ಹಿಡಿದುಕೊಂಡು ಜನ ದೋಣಿಯಲ್ಲಿ ಸಂಚರಿಸುತ್ತಿದ್ದಾರೆ.

Facebook Comments