ಕೆಆರ್‌ಎಸ್‌ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬೇಸಿಗೆ ಬೆಳೆಗಾಗಿ ಏ. 21 ರಿಂದ ನಾಲೆಗಳಿಗೆ ನೀರು

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ, ಏ. 20 : ಕೃಷ್ಣರಾಜಸಾಗರ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬೇಸಿಗೆ ಬೆಳೆಗಳಿಗೆ ಏಪ್ರಿಲ್ 8, 2019ರ ವರೆಗೆ ಕಟ್ಟು ಪದ್ಧತಿಯಲ್ಲಿ ನೀರನ್ನು ಹರಿಸಲಾಗಿದೆ. ಪ್ರಸ್ತುತ, ಬೆಳೆದು ನಿಂತಿರುವ ಬೆಳೆಗಳು ಬಿಸಿಲಿನ ತಾಪಕ್ಕೆ ಒಣಗುತ್ತಿರುವ ಕಾರಣ, ರೈತರಿಂದ ಹಾಗೂ ಜನ ಪ್ರತಿನಿಧಿಗಳಿಂದ ನೀರಿನ ಬೇಡಿಕೆ ಹೆಚ್ಚುತ್ತಿದ್ದು, ಬೆಳೆಗಳನ್ನು ರಕ್ಷಿಸುವ ದೃಷ್ಟಿಯಿಂದ, ಅಣೆಕಟ್ಟೆಯಲ್ಲಿ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿಕೊಂಡು, ಸಾಧ್ಯವಾದಷ್ಟು ಮಟ್ಟಿಗೆ ಬೆಳೆದು ನಿಂತಿರುವ ಬೆಳೆಗಳಿಗೆ ಏಪ್ರಿಲ್ 21 ರಿಂದ ಮೇ 8ರವರೆಗೆ ನಾಲೆಗಳಲ್ಲಿ ನೀರನ್ನು ಹರಿಸಲಾಗುವುದು ಕೃಷ್ಣರಾಜ ಸಾಗರ ಆಧುನೀಕರಣ ಮತ್ತು ಮಧ್ಯಮ ನೀರಾವರಿ ಯೋಜನಾ ಮಂಡ್ಯ ವೃತ್ತದ (ಪ್ರಭಾರ) ಅಧೀಕ್ಷಕ ಇಂಜಿನಿಯರ್ ಬಿ.ಎನ್.ರಾಮಕೃಷ ಅವರು ತಿಳಿಸಿದ್ದಾರೆ.

ರೈತಭಾಂದವರು ನಾಲೆಗಳ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ನಿಗಧಿಪಡಿಸಲಾಗಿರುವ ಬೆಳೆಗಳಿಗೆ/ವಿಸ್ತೀರ್ಣಕ್ಕೆ ಅನುಗುಣವಾಗಿ ಬೆಳೆದು ನಿಂತಿರುವ ಬೆಳೆಗಳಿಗೆ ಮಾತ್ರ ನೀರನ್ನು ಸಮರ್ಪಕವಾಗಿ ಹಾಗೂ ಮಿತ ಬಳಕೆಯಲ್ಲಿ ಉಪಯೋಗಿಸಲು ವಿನಂತಿಸಲಾಗಿದೆ. ಯಾವುದೇ ಹೆಚ್ಚುವರಿ ಬೆಳೆಯನ್ನು ಹಾಗೂ ಹೊಸ ಬೆಳೆಯನ್ನು ನಿಗಧಿಪಡಿಸಿದ ಕ್ಷೇತ್ರಕ್ಕಿಂತ ಮೀರಿದ್ದಲ್ಲಿ ನೀರಾವರಿ ಇಲಾಖೆಯು ಜವಾಬ್ದಾರರಾಗುವುದಿಲ್ಲ.

ನೀರು ಹರಿಸಲಾಗುವ ನಾಲೆಗಳ ವಿವರ: ವಿ.ಸಿ ಮುಖ್ಯ ನಾಲೆ ಮತ್ತು ಅದರ ಉಪ ನಾಲೆಗಳು (ಸಂಪರ್ಕ ನಾಲೆ ಹೊರತುಪಡಿಸಿ), ಎಡದಂಡೆ ಕೆಳಮಟ್ಟದ ನಾಲೆ, ಕಾವೇರಿ ಶಾಖಾ ನಾಲೆ ಹಳೆ ಮದ್ದೂರು ಶಾಖಾ ನಾಲೆ, ಶಿಂಷಾ ಶಾಖಾ ನಾಲೆ, ಕೌಡ್ಲೆ ಉಪ ನಾಲೆ, (9ನೇ ವಿತರಣಾ ನಾಲೆವರೆಗೆ), ಕೆರಗೋಡು ಶಾಖಾ ನಾಲೆ (21ನೇ ವಿತರಣಾ ನಾಲೆವರೆಗೆ),

ಹೊಸ ಮದ್ದೂರು ಶಾಖೆ ನಾಲೆ (31ನೇ ವಿತರಣಾ ನಾಲೆವರೆಗೆ), ಲೋಕಸರ ಶಾಖಾ ನಾಲೆ, ಹೆಬ್ಬಕವಾಡಿ ಹಾಗೂ ತುರುಗನೂರು ಶಾಖಾ ನಾಲೆ (5ನೇ ವಿತರಣಾ ನಾಲೆವರೆಗೆ) ಎಂದು ಕೃಷ್ಣರಾಜ ಸಾಗರ ಆಧುನೀಕರಣ ಮತ್ತು ಮಧ್ಯಮ ನೀರಾವರಿ ಯೋಜನಾ ಮಂಡ್ಯ ವೃತ್ತದ (ಪ್ರಭಾರ) ಅಧೀಕ್ಷಕ ಇಂಜಿನಿಯರ್ ಬಿ.ಎನ್.ರಾಮಕೃಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin