Saturday, April 20, 2024
Homeರಾಜ್ಯ100 ಎಫ್‍ಐಆರ್ ಹಾಕಿದರೂ ಹೆದರಲ್ಲ : ಈಶ್ವರಪ್ಪ

100 ಎಫ್‍ಐಆರ್ ಹಾಕಿದರೂ ಹೆದರಲ್ಲ : ಈಶ್ವರಪ್ಪ

ಶಿವಮೊಗ್ಗ,ಫೆ.10- ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ. ಆದರೆ ನನ್ನ ಮೇಲೆ ಕೇಸ್ ಹಾಕಿದ್ದಾರೆ. ನೂರು ಎಫ್‍ಐಆರ್ ಹಾಕಿದರೂ ನಾನು ಹೆದರುವುದಿಲ್ಲ. ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೆ ಗುಡುಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಡಿ.ಕೆ.ಸುರೇಶ್ ಅವರಿಗೆ ಮೊದಲು ನೋಟಿಸ್ ಕೊಡಲಿ. ನನ್ನ ಹೇಳಿಕೆ ಇಟ್ಟುಕೊಂಡು ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ. ನಾನು ಎಲ್ಲೂ ಸಂಸದ ಡಿ.ಕೆ.ಸುರೇಶ್ ಅವರಿಗೆ ಗುಂಡಿಕ್ಕಿ ಕೊಲ್ಲಿ ಎಂದು ಹೇಳಿಲ್ಲ. ನನಗೆ ನೋಟಿಸ್ ಬಂದಿದೆ, ನಾನು ಉತ್ತರ ಕೊಡುತ್ತೇನೆ. ಪ್ರಕರಣದಲ್ಲಿ ನನಗೆ ಕ್ಲೀನ್‍ಚಿಟ್ ಸಿಗುವ ವಿಶ್ವಾಸ ಇದೆ ಎಂದರು.

ನನಗೆ ಇನ್ನೂ ನೂರು ನೋಟಿಸ್ ಕೊಡಿ, ನನ್ನ ಅಭ್ಯಂತರ ಇಲ್ಲ. ಡಿ.ಕೆ.ಸುರೇಶ್‍ಗೆ ಯಾಕೆ ನೋಟಿಸ್ ನೀಡಿಲ್ಲ ಎಂದು ಪ್ರಶ್ನಿಸಿರುವ ಅವರು, ನಾನು ಡಿ.ಕೆ.ಸುರೇಶ್‍ರನ್ನು ಗುಂಡುಕ್ಕಿ ಕೊಲ್ಲಿ ಎಂದಿಲ್ಲ. ನಾನು ಹೇಳಿರುವುದು ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂದು ಸ್ಪಷ್ಟನೆ ನೀಡಿದರು.

ಈ ದೇಶಕ್ಕಾಗಿ ಬಲಿದಾನ ಆದವರ ಬಗ್ಗೆ ಡಿ.ಕೆ ಸುರೇಶ್ ಅವರಿಗೆ ಗೊತ್ತಿಲ್ಲ. ನನ್ನ ಮಾತನ್ನು ತಿರುಚುವ ಪ್ರಯತ್ನ ಮಾಡಲಾಗುತ್ತಿದೆ. ನನ್ನ ಹೇಳಿಕೆಯನ್ನು ದೇಶದ ಸ್ವತಂತ್ರಕ್ಕಾಗಿ ಹೋರಾಟ ಮಾಡಿದವರು ಸ್ವಾಗತ ಮಾಡುತ್ತಾರೆ. ನೋಟೀಸ್‍ಗೆ ಕಾನೂನು ಬದ್ದವಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ. ಈ ಪ್ರಕರಣದಲ್ಲೂ ನನಗೆ ಕ್ಲೀನ್‍ಚಿಟ್ ಸಿಗುತ್ತದೆ ಎಂದರು.

ಶಾಸಕ ಭರತ್‍ರೆಡ್ಡಿ ನಿವಾಸ, ಕಚೇರಿಗಳ ಮೇಲೆ ಇಡಿ ದಾಳಿ

ಸಂಸದ ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಸರ್ಕಾರ ಸಮರ್ಥಿಸಿಕೊಂಡಿದೆ. ರಾಷ್ಟ್ರದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಪ್ರಧಾನಿ ನರೇಂದ್ರಮೋದಿ ಅವರಿಗೆ ಮನವಿ ಮಾಡಿದ್ದೇನೆ ಎಂದು ಈಶ್ವರಪ್ಪ ಹೇಳಿದರು.

RELATED ARTICLES

Latest News